ಮೈಸೂರು: ಆಷಾಢ ಮಾಸದ ಪ್ರಥಮ ಏಕಾದಶಿ ಪ್ರಯುಕ್ತ ನಗರದ ಸರಸ್ವತಿಪುರಂನ ಶ್ರೀಕೃಷ್ಣಧಾಮದಲ್ಲಿ ಭಕ್ತರಿಗೆ ತಪ್ತ ಮುದ್ರಾಧಾರಣೆ ಕಾರ್ಯಕ್ರಮ ಬುಧವಾರ ನಡೆಯಿತು.

ಶ್ರೀಕೃಷ್ಣ ಮಿತ್ರ ಮಂಡಳಿ ಹಾಗೂ ಶ್ರೀಕೃಷ್ಣ ಟ್ರಸ್ಟ್ ವತಿಯಿಂದ ಉಡುಪಿಯ ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ ಹಾಗೂ ಕಿರಿಯ ಶ್ರೀ ವಿದ್ಯಾರಾಜೇಶ್ವರ ಅವರು ಭಕ್ತರಿಗೆ ಶಂಖ ಚಕ್ರಗಳ ಮುದ್ರಾಧಾರಣೆ ನೆರವೇರಿಸಿದರು. ಬೆಳಿಗ್ಗೆಯಿಂದಲೇ ನೂರಾರು ಭಕ್ತರು ಪಾಲ್ಗೊಂಡಿದ್ದರು.

ಈ ವೇಳೆ ಮಾತನಾಡಿದ ವಿದ್ಯಾಧೀಶ ತೀರ್ಥ ಸ್ವಾಮೀಜಿ, ‘ಆಷಾಢ ಮಾಸದ ಶುಕ್ಲ ಪಕ್ಷದ ಏಕಾದಶಿಯನ್ನು ಶಯನಿ ಏಕಾದಶಿ ಎಂದು ಕರೆಯಲಾಗುತ್ತದೆ. ಈ ದಿನದಿಂದ ಉತ್ಥಾನದ್ವಾದಶಿಯವರೆಗೆ ನಾರಾಯಣನು ಯೋಗನಿದ್ರೆಯಲ್ಲಿ ತೊಡಗುತ್ತಾನೆ ಎನ್ನುವ ನಂಬಿಕೆ ಇದೆ’ ಎಂದರು.

‘ಮಳೆಗಾಲದಲ್ಲಿ ಸೊಳ್ಳೆ, ಕ್ರಿಮಿ–ಕೀಟಗಳಿಂದ ಎದುರಾಗುವ ರೋಗ–ರುಜಿನಗಳನ್ನು ಎದುರಿಸಲು ಬೇಕಾದ ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೂ ತಪ್ತ ಮುದ್ರಾಧಾರಣೆ ಪೂರಕವಾಗಲಿದೆ. ಚಾತುರ್ಮಾಸ್ಯದ ಮೊದಲು ಗೃಹಸ್ಥರು ಹಾಗೂ ಯತಿಗಳು ತಪ್ತ ಮುದ್ರಾಧಾರಣೆ ಮಾಡಿಸಿಕೊಳ್ಳಬೇಕು. ಅನಾನುಕೂಲ ಆದವರು ಏಕಾದಶಿ ದಿನದ ಹೊರತಾಗಿಯೂ ಮುದ್ರಾ ಧಾರಣೆ ಮಾಡಿಸಿಕೊಳ್ಳಬಹುದು’ ಎಂದು ತಿಳಿಸಿದರು.

ಶ್ರೀಕೃಷ್ಣ ಟ್ರಸ್ಟ್ ಉಪಾಧ್ಯಕ್ಷ ರವಿ ಶಾಸ್ತ್ರಿ ಮಾತನಾಡಿ, ‘ಪ್ರತಿ ವರ್ಷವೂ ನಾನಾ ಕಡೆಗಳಿಂದ ಭಕ್ತರು ಆಗಮಿಸಿ ತಪ್ತ ಮುದ್ರೆಯನ್ನು ಹಾಕಿಸಿಕೊಳ್ಳುತ್ತಾರೆ. ಸುದರ್ಶನ ಹೋಮ ನಡೆಸಿ ಅದರಲ್ಲಿ ಕಾಯಿಸಿದ ಶಂಖ, ಚಕ್ರ, ಗದ, ಪದ್ಮ ಚಿಹ್ನೆಯನ್ನು ಎದೆ, ಎಡ ಮತ್ತು ಬಲ ತೋಳಿಗೆ ಹಾಕುವುದನ್ನು ತಪ್ತ ಮುದ್ರಾಧಾರಣೆ ಎನ್ನುತ್ತಾರೆ’ ಎಂದರು.

ಸುರೇಶ್ ಭಟ್ ಹಾಗೂ ಶ್ರೀಕಾಂತ್ ಆಚಾರ್ಯ ನೇತೃತ್ವದಲ್ಲಿ ಸುದರ್ಶನ ಹೋಮ ನೆರವೇರಿಸಲಾಯಿತು.

ಶ್ರೀಕೃಷ್ಣ ಟ್ರಸ್ಟ್ ಉಪಾಧ್ಯಕ್ಷರಾದ ರವಿಶಾಸ್ತ್ರಿ ಮತ್ತು ಪಿ.ಎಸ್. ಶೇಖರ್, ಕಾರ್ಯದರ್ಶಿ ಕೆ.ವಿ. ಶ್ರೀಧರ್ ಮತ್ತು ಶ್ರೀಕೃಷ್ಣ ಮಿತ್ರ ಮಂಡಳಿಯ ಅಧ್ಯಕ್ಷ ಪಿ.ಜಿ. ಪ್ರವೀಣ್, ಉಪಾಧ್ಯಕ್ಷ ಗೋಪಾಲಕೃಷ್ಣನ್, ವಿಜಯವಿಠ್ಠಲ ವಿದ್ಯಾಸಂಸ್ಥೆಯ ಮುಖ್ಯಸ್ಥ ವಾಸುದೇವ್ ಭಟ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.