ಮೈಸೂರು: ಮೈಸೂರು-ನಂಜನಗೂಡು ರಸ್ತೆಯ ಟೋಲ್ ಗೇಟ್ ಬಳಿ ನಡೆದ, ಟೋಲ್ ಸಿಬ್ಬಂದಿ ಗಣೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಗ್ರಾಮಾಂತರ ದಕ್ಷಿಣ ಠಾಣೆಯ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಶ್ರೀಕಾಂತ್, ದೀಪಕ್, ಮಹೇಶ್ ಎಂಬುವರನ್ನು ವಶಕ್ಕೆ ಪಡೆದಿರುವ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಎಸ್‌ಪಿ ಭೇಟಿ: ಕೊಲೆಯಾದ ಸ್ಥಳಕ್ಕೆ ಮಂಗಳವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭ ಟೋಲ್ ಸಿಬ್ಬಂದಿ ತಮ್ಮ ಸಮಸ್ಯೆ, ಅಹವಾಲನ್ನು ಎಸ್‌ಪಿ ಬಳಿ ಹೇಳಿಕೊಂಡರು. ಸಿಬ್ಬಂದಿಯ ಅಳಲಿಗೆ ಸ್ಪಂದಿಸಿದ ರಿಷ್ಯಂತ್ ಭದ್ರತೆ ಹೆಚ್ಚಿಸುವಂತೆ ಗ್ರಾಮಾಂತರ ಪೊಲೀಸರಿಗೆ ಸೂಚಿಸಿದರು.

ನಾಪತ್ತೆಯಾಗಿರುವ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಿ, ಕಾನೂನು ಕ್ರಮ ಜರುಗಿಸುವುದಾಗಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.