ಮೈಸೂರು: ‘ಇಲ್ಲಿನ ಜೆ.ಪಿ.ನಗರದಲ್ಲಿರುವ ಹಿಂದೂಸ್ಥಾನ್ ಕಾಲೇಜಿನ ತರಬೇತಿ ಮತ್ತು ಉದ್ಯೋಗ ಕೋಶದಿಂದ ಆ.10ರಂದು ಬೆಳಿಗ್ಗೆ 8.30ರಿಂದ ಸಂಜೆ 5.30ರವರೆಗೆ ಉದ್ಯೋಗ ಮೇಳ (ಪೂಲ್ ಕ್ಯಾಂಪಸ್ ಪ್ಲೇಸ್‌ಮೆಂಟ್ ಡ್ರೈವ್) ಹಮ್ಮಿಕೊಳ್ಳಲಾಗಿದೆ’ ಎಂದು ಕೋಶದ ಅಧಿಕಾರಿ ಪುನೀತ್ ತಿಳಿಸಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ವಿಪ್ರೊ, ಎಕ್ಸೆಲ್ ಸಾಫ್ಟ್, ಕಾಗ್ನಿಜೆಂಟ್, ಜಸ್ಟ್ ಡಯಲ್, ಪಿರಾಮಲ್, ಎಚ್‌ಡಿಬಿ ಸೇರಿದಂತೆ 15 ಕಂಪನಿಗಳು ಭಾಗವಹಿಸಿ, ವಿವಿಧ ಹುದ್ದೆಗಳಿಗೆ ಸಂದರ್ಶನ ನಡೆಸಲಿವೆ’ ಎಂದು ಮಾಹಿತಿ ನೀಡಿದರು.

‘ಪ್ರಸ್ತುತ ಶೈಕ್ಷಣಿಕ ವರ್ಷದ ಕೊನೆಯ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ಸ್ನಾತಕ ಹಾಗೂ ಸ್ನಾತಕೋತ್ತರ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳು, 2018, 2019, 2020 ಹಾಗೂ 2021ನೇ ಸಾಲಿನಲ್ಲಿ ತೇರ್ಗಡೆಯಾದವರು ಮೇಳದಲ್ಲಿ ಭಾಗವಹಿಸಬಹುದಾಗಿದೆ. ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ 8861953684 ಸಂಪರ್ಕಿಸಬಹುದು’ ಎಂದು ತಿಳಿಸಿದರು.

ಸಹಾಯಕ ಪ್ರಾಧ್ಯಾಪಕರಾದ ರಾಘವೇಂದ್ರ ಸಿ.ಎಸ್., ವಿ.ಈಶ್ವರ್, ದಿವಾಕರ್ ಡಿ.ಕೆ. ಮತ್ತು ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಎಲ್.ಪಿ. ಮೋಹನ್‌ಕುಮಾರ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.