ಮೈಸೂರು: ದಸರಾ ಗಜಪಡೆಯ ಆನೆ 'ಕಂಜನ್' ಅರಮನೆಯ ಜಯಮಾರ್ತಾಂಡ ದ್ವಾರದ ಆವರಣ ಮೂಲಕ ರಸ್ತೆಗೆ ನುಗ್ಗಿದ ವಿಡಿಯೊ ಶುಕ್ರವಾರ ರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
.ದಸರಾ ಹಬ್ಬ: 34 ರೈಲುಗಳಿಗೆ ಹೆಚ್ಚುವರಿ ಬೋಗಿ.
ಕಂಜನ್ ಕಾಲಿಗೆ ಕಟ್ಟಿದ್ದ ಸರಪಳಿಯನ್ನು ಬಿಡಿಸಿಕೊಂಡು ಅರಮನೆಯಾಚೆಗೆ ಬಂದಿರುವ ಹಾಗೂ ಅವನನ್ನು ಹಿಡಿದು ತರಲು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಮಾವುತರು ಹರಸಾಹಸ ಪಡುತ್ತಿರುವ ದೃಶ್ಯ ಸೆರೆಯಾಗಿದೆ.

'ಮಹೇಂದ್ರ' ಆನೆಯು ಕಂಜನ್ ನನ್ನು ನಿಯಂತ್ರಿಸಲು ಹಿಂದಿನಿಂದ ಓಡಿತು. ಜನರು ಆನೆ ಓಡಿಬರುವುದನ್ನು ನೋಡಿ ದಿಕ್ಕಾಪಾಲಾಗಿ ಓಡಿದರು.
.ಶ್ರೀರಂಗಪಟ್ಟಣ | 'ಮನೆ ಮನೆ ಹಬ್ಬದಂತೆ ದಸರಾ '.
ದೊಡ್ಡಕೆರೆ ಮೈದಾನದ ಬೆಂಗಳೂರು- ನೀಲಗಿರಿ ರಸ್ತೆಯಲ್ಲಿನ ವಾಹನಗಳನ್ನು ನೋಡುತ್ತಿದ್ದಂತೆ ಕಂಜನ್ ಬೆದರಿ ನಿಂತನು. ಮಾವುತರು ಕಾವಾಡಿಗರು ಸಮಾಧಾನ ಪಡಿಸಿದರು. ಯಾವುದೇ ಅನಾಹುತ ಸಂಭವಿಸಿಲ್ಲ. ಘಟನೆಯು ರಾತ್ರಿ 8ರ ಸುಮಾರು ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಈ ಬಗ್ಗೆ ಮಾಹಿತಿಗೆ ಡಿಸಿಎಫ್ ಅವರಿಗೆ ಕರೆ ಮಾಡಿದರೂ ಸ್ವೀಕರಿಸಲಿಲ್ಲ.
.ಮೈಸೂರು ದಸರಾ: ಅರಮನೆಗೆ 20 ಸಾವಿರ ಹೊಸ ಬಲ್ಬ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.