ಮೈಸೂರು: ಲೋಕಸಭೆ ಚುನಾವಣೆ ಮತ ಎಣಿಕೆ ನಡೆಯಲಿರುವ ಮಹಾರಾಣಿ ವಾಣಿಜ್ಯ ಕಾಲೇಜಿನ ಸುತ್ತಲೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಕಾಲೇಜು ಆವರಣಕ್ಕೆ ಸೋಮವಾರ ಭೇಟಿ ನೀಡಿದ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ವ್ಯವಸ್ಥೆಯನ್ನು ಪರಿಶೀಲಿಸಿದರು. ಡಿಸಿಪಿಗಳಾದ ಎಂ.ಮುತ್ತುರಾಜ್ ಹಾಗೂ ಎಸ್.ಜಾಹ್ನವಿ ಅವರು ಅಧಿಕಾರಿ ಹಾಗೂ ಸಿಬ್ಬಂದಿ ಸಭೆ ನಡೆಸಿ ಜವಾಬ್ದಾರಿ ಹಂಚಿಕೆ ಮಾಡಿದರು. ಕೇಂದ್ರದ ಸುತ್ತಲಿನ ರಸ್ತೆಯಲ್ಲಿ ಸಾರ್ವಜನಿಕರ ವಾಹನಗಳ ಸಂಚಾರ ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ಬ್ಯಾರಿಕೇಡ್ ಅಳವಡಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ನಾಲ್ವರು ಡಿಸಿಪಿಗಳು, 7 ಎಸಿಪಿ, 23 ಇನ್‌ಸ್ಪೆಕ್ಟರ್, 58 ಸಬ್ ಇನ್‌ಸ್ಪೆಕ್ಟರ್, 76 ಎಎಸ್‌ಐ, 479 ಹೆಡ್ ಕಾನ್‌ಸ್ಟೆಬಲ್, 90 ಮಹಿಳಾ ಪೊಲೀಸ್ ಸಿಬ್ಬಂದಿ, ಸಿಎಆರ್‌ನ 12 ಯುನಿಟ್ ಹಾಗೂ ನಾಲ್ಕು ಕಮಾಂಡೊ ಪಡೆಗಳನ್ನು ನಿಯೋಜಿಸಲಾಗಿದೆ.

ಸಂಚಾರ ನಿರ್ವಹಣೆಗಾಗಿ ಡಿಸಿಪಿ, ಎಸಿಪಿ, ಏಳು ಸಬ್ ಇನ್‌ಸ್ಪೆಕ್ಟರ್, 30 ಎಎಸ್‌ಐ, 184 ಹೆಡ್ ಕಾನ್‌ಸ್ಟೆಬಲ್ ಮತ್ತು ಕಾನ್‌ಸ್ಡೆಬಲ್‌ಗಳನ್ನು ನಿಯೋಜಿಸಲಾಗಿದೆ. ಮೊಬೈಲ್ ಕಮಾಂಡೊ ವಾಹನವೂ ಕೇಂದ್ರದ ಆವರಣದಲ್ಲಿ ಇರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.