ಮೈಸೂರು: ಇಲ್ಲಿನ ಅಂಬಾವಿಲಾಸ ಅರಮನೆಯ ಪ್ರವೇಶ ಟಿಕೆಟ್‌ಗಳನ್ನು ವಾಟ್ಸ್‌ಆ್ಯಪ್‌ನಲ್ಲೂ ಪಡೆಯುವುದಕ್ಕೆ ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಸರ್ಕಾರದ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯ (ಇಡಿಸಿಎಸ್)ದಿಂದ ಮೊಬೈಲ್ ಒನ್ ಯೋಜನೆಯ ಮೂಲಕ, ಮೊಬೈಲ್ ಫೋನ್ ಮೂಲಕ ಟಿಕೆಟ್ ಖರೀದಿಸಲು ‘ವಾಟ್ಸ್‌ಆ್ಯಪ್ ಟಿಕೆಟಿಂಗ್’ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ಇದರಿಂದಾಗಿ, ಅತಿ ಸುಲಭವಾಗಿ ಟಿಕೆಟ್ ಪಡೆಯಬಹುದಾಗಿದೆ. ಜೊತೆಗೆ ಪ್ರವಾಸಿಗರ ಸಮಯವೂ ಉಳಿತಾಯವಾಗಲಿದೆ ಎಂದು ಅರಮನೆ ಮಂಡಳಿಯ ಉಪ ನಿರ್ದೇಶಕ ಟಿ.ಎಸ್. ಸುಬ್ರಹ್ಮಣ್ಯ ತಿಳಿಸಿದ್ದಾರೆ.

ಈ ಉಪಕ್ರಮ ಬುಧವಾರದಿಂದಲೇ ಜಾರಿಗೆ ಬಂದಿದೆ. ವಾಟ್ಸ್‌ಆ್ಯಪ್ ಸಂ: 88841 60088ಗೆ ‘Hi’ ಎಂದು ಟೈಪ್ ಮಾಡುವ ಮೂಲಕ ಅಥವಾ ಅರಮನೆ ಮಂಡಳಿಯ ಜಾಲತಾಣ https://mysorepalace.karnataka.gov.inನಲ್ಲಿ ನೀಡಿರುವ ವಾಟ್ಸ್‌ಆ್ಯಪ್ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಕನ್ನಡ ಅಥವಾ ಇಂಗ್ಲಿಷ್‌ನಲ್ಲಿ ಟಿಕೆಟ್ ಖರೀದಿಸಬಹುದಾಗಿದೆ. ಆ ಟಿಕೆಟ್‌ಗಳ ವ್ಯಾಲಿಡಿಸಿ ಖರೀದಿಸಿದ ದಿನದಿಂದ ಐದು ದಿನಗಳವರೆಗೆ ಇರುತ್ತದೆ. ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಅರಮನೆಯನ್ನು ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.