ಮೈಸೂರು: ಇಲ್ಲಿನ ಮೈಸೂರು ವಿಶ್ವವಿದ್ಯಾಲಯದಲ್ಲಿ ಅಗತ್ಯಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿರುವ ಬೋಧಕೇತರ ಸಿಬ್ಬಂದಿಯ ಕೆಲಸದ ಮೇಲೆ ತೂಗುಗತ್ತಿ ತೂಗುತ್ತಿದೆ. ಸಿಬ್ಬಂದಿಯನ್ನು ತರ್ಕಬದ್ಧಗೊಳಿಸಲು (ರ್ಯಾಷನಲೈಸ್) ಕ್ರಮ ಕೈಗೊಳ್ಳುವಂತೆ ಸರ್ಕಾರದಿಂದ ಆದೇಶ ಬಂದಿರುವುದು ಇದಕ್ಕೆ ಕಾರಣ.

ಸರ್ಕಾರದ ಸೂಚನೆ ಮೇರೆಗೆ ನಿವೃತ್ತ ಕುಲಪತಿ ಪ್ರೊ.ಅಂಬಳಿಕೆ ಹಿರಿಯಣ್ಣ ಅಧ್ಯಕ್ಷತೆಯ ಸಮಿತಿಯು, ಸಲಹಾ ವರದಿಯನ್ನು ಸಲ್ಲಿಸಿದ್ದು, ಅದನ್ನು ಆಧರಿಸಿ ಕ್ರಮ ವಹಿಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಇದು ನಡೆದಲ್ಲಿ, ಒಂದಷ್ಟು ಮಂದಿ ತಾತ್ಕಾಲಿಕ ನೌಕರರು ಕೆಲಸ ಕಳೆದುಕೊಳ್ಳುವ ಸಾಧ್ಯತೆ ಇದೆ.

ಇಲ್ಲಿನ ಕ್ರಾಫರ್ಡ್ ಭವನದಲ್ಲಿ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಮೈಸೂರು ವಿಶ್ವವಿದ್ಯಾಲಯದ ಶಿಕ್ಷಣ ಮಂಡಳಿ ಸಭೆಯಲ್ಲಿ ಈ ವಿಷಯ ಚರ್ಚೆಯಾಯಿತು.

ಹೆಚ್ಚುವರಿ ಬೋಧಕೇತರ ಸಿಬ್ಬಂದಿ ನೇಮಕಾತಿ ಮಾಡಿಕೊಂಡಿದ್ದರಿಂದ ಆಗುತ್ತಿರುವ ವೇತನ ಹೊರೆಯ ಕುರಿತು ಶಿಕ್ಷಣ ಮಂಡಳಿ ಸದಸ್ಯರೂ ಆದ…

[6:01 pm, 28/6/2024] Mahesh Bhagiratha Mys: ‘ಮದ್ಯದ ಬಾಟಲಿ, ಸಿಗರೇಟು ಪ್ಯಾಕೆಟ್!’

ಮೈಸೂರು ವಿಶ್ವವಿದ್ಯಾಲಯದಿಂದ ಕ್ಯಾಂಪಸ್ನಲ್ಲಿ ನಿರ್ವಹಣೆಯು ಸರಿಯಾಗಿ ನಡೆಯುತ್ತಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಅಸಮಾಧಾನ ವ್ಯಕ್ತಪಡಿಸಿದರು.

‘ಮದ್ಯದ ಬಾಟಲಿಗಳು, ಸಿಗರೇಟ್ ಪ್ಯಾಕೆಟ್ಗಳು ಕ್ಯಾಂಪಸ್ನ ಅಲ್ಲಲ್ಲಿ ಬಿದ್ದಿರುತ್ತವೆ. ನಿರ್ವಹಣೆಗೆಂದೇ ₹ 21 ಕೋಟಿ ವಿನಿಯೋಗಿಸಲಾಗುತ್ತಿದೆ. ಆದರೂ ಸಮರ್ಪಕವಾಗಿ ಆಗುತ್ತಿಲ್ಲ. ಯಾಕೆ ಈ ಅವ್ಯವಸ್ಥೆ? ಸಮರ್ಪಕ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು ಹಾಗೂ ಸೋರಿಕೆಯನ್ನು ತಡೆಯಬೇಕು’ ಎಂದು ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.