ಬುಧವಾರ, 3 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸೂರಜ್‌ ಬಂಧನದಲ್ಲಿ ಷಡ್ಯಂತ್ರವಿಲ್ಲ: ಯತೀಂದ್ರ ಸಿದ್ದರಾಮಯ್ಯ

Published 23 ಜೂನ್ 2024, 7:45 IST
Last Updated 23 ಜೂನ್ 2024, 7:45 IST
ಅಕ್ಷರ ಗಾತ್ರ

ಮೈಸೂರು: ‘ವಿಧಾನ ಪರಿಷತ್‌ ಜೆಡಿಎಸ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ ವಿಷಯದಲ್ಲಿ ಯಾವುದೇ ಷಡ್ಯಂತ್ರವಿಲ್ಲ’ ಎಂದು ವಿಧಾನ ಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಇಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ‘ಲೈಂಗಿಕ ದೌರ್ಜನ್ಯದ ಬಗ್ಗೆ ಸೂರಜ್‌ ವಿರುದ್ಧ ಯುವಕನೊಬ್ಬ ದೂರು ಕೊಟ್ಟಿದ್ದಾನೆ. ತಪ್ಪು ಯಾರೇ ಮಾಡಿದ್ದರೂ ತಪ್ಪೇ. ಪೊಲೀಸರು ನಿಕ್ಷಪಕ್ಷಪಾತ ತನಿಖೆ ನಡೆಸುತ್ತಿದ್ದಾರೆ. ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ’ ಎಂದರು.

‘ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿ ವಿರುದ್ಧ ಪ್ರತಿಭಟಿಸಲು ಬಿಜೆಪಿಯವರಿಗೆ ಯಾವುದೇ ನೈತಿಕ ಹಕ್ಕಿಲ್ಲ. ದೇಶದಲ್ಲಿ ತೈಲ ಬೆಲೆ ಏರಿಕೆಯಾಗಲು ಬಿಜೆಪಿಯೇ ಕಾರಣ‌. ಚುನಾವಣೆ ಸಂದರ್ಭದಲ್ಲಿ ಕಡಿಮೆ ಮಾಡಿದರು. ಈಗ ಬೆಲೆ ಏರಿಕೆ ಮಾಡಲಾಗಿದೆ’ ಎಂದು ಪ್ರತಿಕ್ರಿಯಿಸಿದರು.

‘ಚನ್ನಪಟ್ಟಣ ಕ್ಷೇತ್ರದ ಗ್ರೌಂಡ್ ರಿಯಾಲಿಟಿ ನನಗೆ ಗೊತ್ತಿಲ್ಲ. ಉಪ ಚುನಾವಣೆಗೆ ಸಂಬಂಧಿಸಿದಂತೆ ನಮ್ಮ ಪಕ್ಷದ ವರಿಷ್ಠರು, ಅಲ್ಲಿನ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಸೇರಿ ಅಭ್ಯರ್ಥಿ ಆಯ್ಕೆ ಮಾಡುತ್ತಾರೆ’ ಎಂದು ಹೇಳಿದರು.

ಸೂರಜ್‌ ಬಂಧನ: ಪ್ರತಿಕ್ರಿಯೆಗೆ ವಿಜಯೇಂದ್ರ ನಕಾರ

ಮೈಸೂರು: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಪ್ರಕರಣದಲ್ಲಿ ವಿಧಾನ ಪರಿಷತ್‌ ಜೆಡಿಎಸ್ ಸದಸ್ಯ ಡಾ.ಸೂರಜ್‌ ರೇವಣ್ಣ ಅವರನ್ನು ಬಂಧಿಸಿರುವ ಕುರಿತು ಪ್ರತಿಕ್ರಿಯಿಸಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನಿರಾಕರಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಭಾನುವಾರ ಮಾತನಾಡಿದ ಅವರು, ‘ಆ ವಿಚಾರ ಬೇಡ ಬಿಡಿ’ ಎಂದಷ್ಟೆ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT