ಮೈಸೂರು: ‘ಹಂಚ್ಯಾ ಗ್ರಾಮಕ್ಕೆ ಸ್ಥಳಾಂತರಿಸಿರುವ ಕೆಎಆರ್ಪಿ ಮೌಂಟೆಡ್ ಕಂಪನಿಯಲ್ಲಿನ ಪಶುವೈದ್ಯ ಶಾಲೆ ಮತ್ತು ವೈದ್ಯಕೀಯ ಸಿಬ್ಬಂದಿಯನ್ನು ಅಲ್ಲಿಯೇ ಮುಂದುವರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಮೈಸೂರು ನಗರ ಪೊಲೀಸ್ ಆಯುಕ್ತರು, ಪೊಲೀಸ್ ಮಹಾ ನಿರ್ದೇಶಕರಿಗೆ (ಡಿಜಿ) ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

‘ಈ ಘಟಕದಲ್ಲಿ ಪ್ರಸ್ತುತ 48 ಅಶ್ವಗಳಿವೆ. ಇವುಗಳ ಆರೋಗ್ಯ ತಪಾಸಣೆಗೆ ವೈದ್ಯಕೀಯ ಸಿಬ್ಬಂದಿಯ ಅವಶ್ಯಕತೆ ಯಾವಾಗಲೂ ಬೇಕಿದೆ. ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರಕದಿದ್ದರೇ ಕುದುರೆಗಳು ಸಾಯಲಿವೆ. ಆದ್ದರಿಂದ ವೈದ್ಯಕೀಯ ಘಟಕವನ್ನು ಸ್ಥಳಾಂತರಿಸಬಾರದು’ ಎಂದು ಆಯುಕ್ತರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘ಕೆಎಆರ್ಪಿ ಮೌಂಟೆಡ್ ಘಟಕದ ಸನಿಹದಲ್ಲೇ ಮೈಸೂರು ನಗರ ಪೊಲೀಸ್ ಕಮೀಷನರೇಟ್ ಘಟಕ ಹಾಗೂ ಜಿಲ್ಲಾ ಪೊಲೀಸ್ ಘಟಕದ ಶ್ವಾನ ದಳಗಳಿದ್ದು, ತುರ್ತು ಸಂದರ್ಭದಲ್ಲಿ ಪಶುವೈದ್ಯ ಸೇವೆ ಬೇಕಿದೆ. ಆದ್ದರಿಂದ ಇಲ್ಲಿರುವ ಪಶುವೈದ್ಯ ಆಸ್ಪತ್ರೆಯನ್ನು ಬೇರೆಡೆಗೆ ಸ್ಥಳಾಂತರ ಮಾಡದೇ, ಇಲ್ಲಿಯೇ ಮುಂದುವರೆಸುವಂತೆ ಸರ್ಕಾರಕ್ಕೆ ಪ್ರಸ್ತಾವಿಸಿ’ ಎಂದು ಪೊಲೀಸ್ ಆಯುಕ್ತರು ತಮ್ಮ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.