ಮೈಸೂರು: ‘ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದರೂ, ಸೋಂಕಿನ ತೀವ್ರತೆ ಹಾಗೂ ಲಕ್ಷಣಗಳು ಸೌಮ್ಯವಾಗಿವೆ. ಹೀಗಾಗಿ ನಾಗರಿಕರು ಆತಂಕ ಪಡುವ ಅಗತ್ಯವಿಲ್ಲ’ ಎಂದು ಸಚಿವ ಡಾ. ಕೆ. ಸುಧಾಕರ್ ಹೇಳಿದರು.

ಬೆಂಗಳೂರಿನ ಎರಡು ಶಾಲೆಗಳಲ್ಲಿ 30ಕ್ಕೂ ಹೆಚ್ಚು ಮಕ್ಕಳಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮಂಗಳವಾರ ಇಲ್ಲಿನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತರಗತಿಯಲ್ಲಿ 10ರಿಂದ 12 ಮಕ್ಕಳಿಗೆ ಸೋಂಕು ದೃಢಪಟ್ಟರೆ ಶಾಲೆಗೆ ರಜೆ ನೀಡಲಾಗುತ್ತಿದೆ’ ಎಂದರು.

‘ಮೈಸೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೋವಿಡ್ ದೃಢ ಪ್ರಕರಣಗಳ ಪ್ರಮಾಣ ಶೇ 1ಕ್ಕಿಂತ ಕಡಿಮೆಯಿದ್ದು, ಸಾವು– ನೋವು ಸಂಭವಿಸಿದ ವರದಿಯಾಗಿಲ್ಲ. ನಿತ್ಯ ಪ್ರತಿ ಜಿಲ್ಲೆಯಲ್ಲಿ 500 ಕೋವಿಡ್ ಪರೀಕ್ಷೆ ನಡೆಸುತ್ತಿರುವುದರಿಂದ ಪರೀಕ್ಷೆಯನ್ನು ಹೆಚ್ಚಳಗೊಳಿಸುವ ಅಗತ್ಯವಿಲ್ಲ’ ಎಂದು ಪ್ರತಿಕ್ರಿಯಿಸಿದರು.

‘12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ಹಾಕಿಸಲು ಪೋಷಕರು ಗಮನಹರಿಸಬೇಕು. ಜನ ದಟ್ಟಣೆ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಸೇರಿದಂತೆ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು’ ಎಂದು ಹೇಳಿದ ಅವರು, ‘ಕೇಂದ್ರದಿಂದ ಹೊಸ ಕೋವಿಡ್ ಮಾರ್ಗಸೂಚಿ ಬಂದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬೆಂಗಳೂರು: ಎರಡು ಶಾಲೆಯ 31 ವಿದ್ಯಾರ್ಥಿಗಳಿಗೆ ಕೋವಿಡ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.