ಮೈಸೂರು: ಪ್ರಧಾನಿ ನರೇಂದ್ರಮೋದಿ ಜೂನ್ 20ರಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಲಿದ್ದು, ಈ ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 12ರಿಂದ ರಾತ್ರಿ 9ವರೆಗೆ ಚಾಮುಂಡಿಬೆಟ್ಟ ಹಾಗೂ ಅಲ್ಲಿನ ದೇವಸ್ಥಾನಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.

‘ಭದ್ರತಾ ಹಿತದೃಷ್ಟಿಯಿಂದ ಈ ಕ್ರಮ ವಹಿಸಲಾಗಿದೆ. ನಿಷೇಧಿತ ಅವಧಿಯಲ್ಲಿ ಮೆಟ್ಟಿಲುಗಳ ಮಾರ್ಗದಲ್ಲಿ ಬರುವುದಕ್ಕೂ ಭಕ್ತರು ಹಾಗೂ ಸಾರ್ವಜನಿಕರಿಗೆ ನಿರ್ಬಂಧವಿದೆ. ತುರ್ತು ಸೇವಾ ವಾಹನಗಳನ್ನು ಹೊರತುಪಡಿಸಿ, ಇತರ ಸಾರ್ವಜನಿಕ ಹಾಗೂ ಖಾಸಗಿ ವಾಹನಗಳಿಗೆ ಪ್ರವೇಶ ಇರುವುದಿಲ್ಲ. ಚಾಮುಂಡಿಬೆಟ್ಟದ ಗ್ರಾಮಸ್ಥರು ಅನಿವಾರ್ಯ ಪ್ರಸಂಗವಿದ್ದಲ್ಲಿ ವಾಸಸ್ಥಳದ ಗುರುತಿನ ಚೀಟಿ ಹೊಂದಿರಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಶಿಷ್ಟಾಚಾರ ವ್ಯವಸ್ಥೆ ಹೊಂದಿರುವ ಗಣ್ಯರು, ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳ ವಾಹನಗಳಿಗಷ್ಟೆ ಪ್ರವೇಶವಿರುತ್ತದೆ. ಖಾಸಗಿ ವಾಹನಗಳ ಪ್ರವೇಶವನ್ನು ಕಡ್ಡಾಯವಾಶಗಿ ನಿಷೇಧಿಸಲಾಗಿದೆ’ ಎಂದು ಪ್ರಕಟಣೆ ನೀಡಿದ್ದಾರೆ.

ಓದಿ...ಮೈಸೂರಿಗೆ ಪ್ರಧಾನಿ ಮೋದಿ ಭೇಟಿ:ಭದ್ರತೆ ಪರಿಶೀಲಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.