ಮೈಸೂರು: ‘ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಬೇಕು’ ಎಂದು ಆಗ್ರಹಿಸಿ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು ಕ್ರಾಫರ್ಡ್ ಭವನದ ಮುಂಭಾಗ ಪ್ರತಿಭಟಿಸಿದರು.

ಸಂಘಟನೆಯ ರಾಜ್ಯ ಖಜಾಂಜಿ ಸುಭಾಷ್ ಬೆಟ್ಟದಕೊಪ್ಪ ಮಾತನಾಡಿ, ‘ವಿಶ್ವವಿದ್ಯಾನಿಲಯದ ಪದವಿ ವಿದ್ಯಾರ್ಥಿಗಳ ಪರೀಕ್ಷಾ ಸೂಚನೆ ಪ್ರಕಾರ ಡಿ. 28 ರಿಂದ ಪರೀಕ್ಷೆಗಳು ಪ್ರಾರಂಭವಾಗಲಿದೆ. ಆದರೆ ಕಾಲೇಜುಗಳು ಆಗಸ್ಟ್ನಲ್ಲಿ ಪ್ರಾರಂಭವಾದರೂ ಅತಿಥಿ ಉಪನ್ಯಾಸಕರ ಕೊರತೆಯಿಂದಾಗಿ ಮತ್ತು ಅತಿಥಿ ಉಪನ್ಯಾಸಕರ ನೇಮಕವಾಗದ ಕಾರಣ ತರಗತಿಗಳು ನಡೆದಿಲ್ಲ’ ಎಂದರು.

‘ಕಾಲೇಜು ಆರಂಭವಾಗಿ ಒಂದೂವರೆ ತಿಂಗಳಿನ ನಂತರ ತರಗತಿಗಳು ಪ್ರಾರಂಭವಾಗಿವೆ. ಇದರಿಂದ ಪಠ್ಯಕ್ರಮಗಳ ಬೋಧನೆ ಸಂಪೂರ್ಣವಾಗಿ ಮುಗಿದಿಲ್ಲ. ಪಠ್ಯಕ್ರಮ ಪೂರ್ಣಗೊಳ್ಳದೆ ಪರೀಕ್ಷೆ ನಡೆಸುವುದು ಅವೈಜ್ಞಾನಿಕ. ಅಲ್ಲದೆ ಇದು ವಿದ್ಯಾರ್ಥಿಗಳ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ ಆದ್ದರಿಂದ ಪರೀಕ್ಷೆಗಳನ್ನು ಮುಂದೂಡಬೇಕು’ ಎಂದು ಆಗ್ರಹಿಸಿದರು.

ಜಿಲ್ಲಾ ಕಾರ್ಯದರ್ಶಿ ನಿತಿನ್, ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳಾದ ಉಮೇಶ್, ಮನೋಜ್, ಕಿರಣ್ ಕುಮಾರ್, ಮಹದೇವ್, ಸಂತೋಷ್, ಪೂಜಾ, ಕವನ, ರಾಧಿಕಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.