ಮೈಸೂರು: ‘ಪ್ರಜಾವಾಣಿ’, ‘ಡೆಕ್ಕನ್ ಹೆರಾಲ್ಡ್’ ಹಾಗೂ ‘ಇನ್ಸೈಟ್ಸ್’ ಐಎಎಸ್ ಅಕಾಡೆಮಿ ಸಹಯೋಗದಲ್ಲಿ, ಐಎಎಸ್, ಐಪಿಎಸ್ ಅಧಿಕಾರಿಗಳಾಗಬೇಕೆಂಬ ಕನಸು ಹೊತ್ತಿರುವ ವಿದ್ಯಾರ್ಥಿಗಳು ಹಾಗೂ ಆಕಾಂಕ್ಷಿಗಳಿಗೆ ಮಾರ್ಗದರ್ಶನ ನೀಡುವ ಸಲುವಾಗಿ ‘ಗೈಡಿಂಗ್ ಫೋರ್ಸ್’ ಉಪನ್ಯಾಸ ಕಾರ್ಯಕ್ರಮ ಜುಲೈ 19ರಂದು ಬೆಳಿಗ್ಗೆ 10ಕ್ಕೆ ಇಲ್ಲಿನ ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ನಡೆಯಲಿದೆ.

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ)ದಿಂದ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹೇಗೆ ಸಿದ್ಧತೆ ಮಾಡಿಕೊಳ್ಳಬೇಕು, ಲಭ್ಯವಿರುವ ಸಂಪನ್ಮೂಲಗಳೇನು, ಹೇಗೆ ಬಳಸಿಕೊಳ್ಳಬೇಕು ಎಂಬ ಬಗ್ಗೆ ಸಂಪನ್ಮೂಲ ವ್ಯಕ್ತಿಗಳು ತಿಳಿಸಿಕೊಡಲಿದ್ದಾರೆ.

ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಹಾಗೂ ‘ಇನ್ಸೈಟ್ಸ್’ ಐಎಎಸ್ ಅಕಾಡೆಮಿ ಸಂಸ್ಥಾಪಕ ಹಾಗೂ ನಿರ್ದೇಶಕ ವಿನಯ್ಕುಮಾರ್ ಮಾರ್ಗದರ್ಶನ ನೀಡಲಿದ್ದಾರೆ.

ಅಂದು ಬೆಳಿಗ್ಗೆ 8.30ರಿಂದ ಸ್ಥಳದಲ್ಲೇ ನೋಂದಣಿ ಆರಂಭವಾಗಲಿದೆ. ಪ್ರವೇಶ ಉಚಿತವಿದೆ. ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಲು ಮೊ.ಸಂಖ್ಯೆ: 94489 14995 (ಪ್ರಕಾಶ್ ಎಸ್.), 96069 12170 (ರವಿ ಸಿ.ಜೆ.) ಅಥವಾ 96069 12168 (ಲೋಕೇಶ್ ಪಿ.ಆರ್.) ಅವರನ್ನು ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.