ಮೈಸೂರು: ‘ಮುಸ್ಲಿಮರ ಕೈಯಲ್ಲಿರುವ ಪೆಟ್ರೋಲ್ ಬಾಂಬ್, ತಲ್ವಾರ್‌ಗಳನ್ನು ಸರ್ಕಾರ ಕಿತ್ತುಕೊಳ್ಳಬೇಕು. ಇಲ್ಲದಿದ್ದರೆ, ಗಣೇಶ ಮೂರ್ತಿಗಳ ಮೆರವಣಿಗಳಲ್ಲಿ ನಾವೂ ಅವುಗಳನ್ನು ಹಿಡಿದುಕೊಳ್ಳಬೇಕಾಗುತ್ತದೆ. ಆಗ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ’ ಎಂದು ಬಿಜೆಪಿಯ ಮಾಜಿ ಸಂಸದ ಪ್ರತಾಪ ಸಿಂಹ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗಣೇಶ ಮೂರ್ತಿಗಳ ಅದ್ದೂರಿ ಮೆರವಣಿಗೆಗೆ ಸಿದ್ಧತೆಗಳು ನಡೆದಿದ್ದು, ಸರ್ಕಾರ ಮುಸ್ಲಿಂ ಪುಂಡರ ಮೇಲೆ ನಿಯಂತ್ರಣ ಹೇರಬೇಕು. ಇಲ್ಲದಿದ್ದರೆ ನಮ್ಮ ರಕ್ಷಣೆ, ಜವಾಬ್ದಾರಿ ನಮಗೆ ಗೊತ್ತಿದೆ’ ಎಂದು ಹೇಳಿದರು.

‘ನಾಗಮಂಗಲದಲ್ಲಿ ಅಮಾಯಕ ಹಿಂದೂಗಳನ್ನು ಬಂಧಿಸಿದರೆ ಮತ್ತೆ ಅಲ್ಲಿಗೆ ಹೋಗುತ್ತೇವೆ, ಪೊಲೀಸ್ ಠಾಣೆಗೂ ಬರುತ್ತೇವೆ. ಅಲ್ಲಿ ಗಲಾಟೆ ಶುರು ಮಾಡಿದವರ ಮೇಲೆ ಕಠಿಣ ಕ್ರಮವಾಗಬೇಕು. ಅದನ್ನು ಬಿಟ್ಟು, ಗಲಾಟೆ ಕುರಿತು ಪ್ರತಿಕ್ರಿಯಿಸಿದವರ ಮೇಲೆ ಕ್ರಮವಾದರೆ ಅರ್ಥವೇನು?’ ಎಂದು ಕೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.