ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗರ್ಭಿಣಿ ಸಾವು: ಮರಣೋತ್ತರ ಪರೀಕ್ಷೆ ವಿಳಂಬಕ್ಕೆ ಆಕ್ರೋಶ

Published : 22 ಆಗಸ್ಟ್ 2024, 16:03 IST
Last Updated : 22 ಆಗಸ್ಟ್ 2024, 16:03 IST
ಫಾಲೋ ಮಾಡಿ
Comments

ಎಚ್.ಡಿ.ಕೋಟೆ: ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರಕದೆ ಗರ್ಭಿಣಿ ಮಹಿಳೆ ಗುರುವಾರ ಮೃತಪಟ್ಟಿದ್ದಾರೆ. ತಾಲ್ಲೂಕಿನ ದೇವಲಾಪುರ ಗ್ರಾಮದ ಪ್ರದೀಪ್ ಅವರ ಪತ್ನಿ ಗೀತಾ (23) ಮೃತ ಮಹಿಳೆ.

ಗುರುವಾರ ಬೆಳಗಿನ ಜಾವ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಕುಟುಂಬದವರು ತುರ್ತು ವಾಹನದಲ್ಲಿ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಲು ಕರೆದುಕೊಂಡು ಬಂದಿದ್ದಾರೆ.

ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಗರ್ಭಿಣಿ ಮಹಿಳೆ ಈಗಾಗಲೇ ಮೃತಪಟ್ಟಿದ್ದಾರೆ, ಜೊತೆಗೆ ಹೊಟ್ಟೆಯಲ್ಲಿದ್ದ ಮಗು ಕೂಡ ಮೃತಪಟ್ಟಿದೆ ಎಂದು ತಿಳಿಸಿದ್ದಾರೆ. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲು ಶವಗಾರಕ್ಕೆ ಸಾಗಿಸಲಾಯಿತು.

ಮರಣೋತ್ತರ ಪರೀಕ್ಷೆ ವಿಳಂಬ: ಮರಣೋತ್ತರ ಪರೀಕ್ಷೆ ನಡೆಸಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮೃತ ಮಹಿಳೆಯ ಸಂಬಂಧಿಕರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

‘ಗರ್ಭಿಣಿ ಮಹಿಳೆ ಬೆಳಿಗ್ಗೆ 5 ಗಂಟೆಗೆ ಮೃತಪಟ್ಟಿದ್ದು, ಮಧ್ಯಾಹ್ನ ಒಂದು ಗಂಟೆಯಾದರೂ ಮರಣೋತ್ತರ ಪರೀಕ್ಷೆ ನಡೆಸಲು ವೈದ್ಯರು ಮುಂದಾಗಿಲ್ಲ’ ಎಂದು ಶವಾಗಾರದ ಹತ್ತಿರ ನೂರಕ್ಕೂ ಹೆಚ್ಚು ಜನರು ಪ್ರತಿಭಟನೆ ಮಾಡಲು ಮುಂದಾದರು.

ಅಷ್ಟರಲ್ಲಿ ತಹಶಿಲ್ದಾರ್ ಶ್ರೀನಿವಾಸ ಸ್ಥಳಕ್ಕೆ ಭೇಟಿ ನೀಡಿ, ಪೊಲೀಸರು ಮತ್ತು ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಲು ಯಾಕೆ ವಿಳಂಬವಾಗಿದೆ ಎಂಬ ಬಗ್ಗೆ ಸೂಕ್ತ ಮಾಹಿತಿ ಪಡೆದರು. ನಂತರ ಮೃತರ ಕುಟುಂಬವನ್ನು ಸಮಾಧಾನಪಡಿಸಿ ಮರಣೋತ್ತರ ಪರೀಕ್ಷೆ ನಡೆಸಲು ಸೂಚಿಸಿದರು. ಬಳಿಕ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Cut-off box - ‘ಮೈಸೂರಿನಲ್ಲಿ ಮರಣೋತ್ತರ ಪರೀಕ್ಷೆಗೆ ಸಲಹೆ; ವಿಳಂಬ’ ‘ಗರ್ಭಿಣಿ ಮಹಿಳೆಯ ಮರಣೋತ್ತರ ಪರೀಕ್ಷೆ ನಡೆಸಲು ಅನುಭವಿ ವೈದ್ಯರು ಹಾಗೂ ಸೂಕ್ತ ಸಲಕರಣೆಗಳು ನಮ್ಮ ಆಸ್ಪತ್ರೆಯಲ್ಲಿ ಇಲ್ಲದ ಕಾರಣ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿಸಿದರೆ ಸಾವಿನ ನಿಖರ ಸತ್ಯಾಂಶ ತಿಳಿಯುತ್ತದೆ ಎಂದು ಕುಟುಂಬದವರಿಗೆ ತಿಳಿಸಲಾಯಿತು. ಆದರೆ ಕುಟುಂಬಸ್ಥರು ಮೈಸೂರಿಗೆ ಮೃತದೇಹವನ್ನು ಕೊಂಡೊಯ್ಯಲು ವಿಳಂಬ ಮಾಡಿದರು ಹಾಗಾಗಿ ಮರಣೋತ್ತರ ಪರೀಕ್ಷೆ ನಡೆಸಲು ವಿಳಂಬ ಆಯಿತು’ ಎಂದು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆ ವೈದ್ಯ ಅಧಿಕಾರಿ ಡಾ.ಸೋಮಣ್ಣ ತಿಳಿಸಿದರು. ‘ತಹಶಿಲ್ದಾರ್ ಶ್ರೀನಿವಾಸ ಅವರ ಸೂಚನೆ ಮೇರೆಗೆ ಮತ್ತು ಮೃತ ಸಂಬಂಧಿಕರ ಮನವಿ ಮೇರೆಗೆ ನಮ್ಮ ಆಸ್ಪತ್ರೆಯ ವೈದ್ಯರಾದ ಚರ್ಮರೋಗ ತಜ್ಞೆ ಸಹನಾ ಹಾಗೂ ಸ್ತ್ರೀ ರೋಗ ತಜ್ಞೆ ಪೂರ್ಣಿಮಾ ಅವರಿಂದ ಮರಣೋತ್ತರ ಪರೀಕ್ಷೆ ನಡೆಸಲಾಯಿತು’ ಎಂದರು.  .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT