ಮೈಸೂರು: ‘ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಕಾಂಗ್ರೆಸ್ ಬದ್ಧವಾಗಿದ್ದು, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಅವರನ್ನು ಬೆಂಬಲಿಸಬೇಕು’ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಕೋರಿದರು.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಹೊಸ ಪಿಂಚಣಿ ಪದ್ಧತಿ (ಎನ್‌ಪಿಎಸ್) ರದ್ದು ಮಾಡಿ ಹಳೆಯ ಪಿಂಚಣಿ ವ್ಯವಸ್ಥೆ (ಒಪಿಎಸ್) ಮರು ಜಾರಿ ಮಾಡಲಿದ್ದೇವೆ. ಶಿಕ್ಷಕರು ನಡೆಸಿದ ಅನೇಕ ಹೋರಾಟಗಳಲ್ಲಿ ಭಾಗವಹಿಸಿದ್ದೇನೆ. ಕುಮಾರ್ ನಾಯ್ಕ ವರದಿಯ ಶಿಫಾರಸುಗಳನ್ನು ಅನುಷ್ಠಾನ ಮಾಡಬೇಕಿದೆ. ಇದಕ್ಕೆ ನಮ್ಮ ಸರ್ಕಾರ ಕ್ರಮ ವಹಿಸಲಿದೆ’ ಎಂದು ಹೇಳಿದರು.

‘ನಾಲ್ಕು ಬಾರಿ ಜಯ ಗಳಿಸಿ 5ನೇ ಬಾರಿಗೆ ಸ್ಪರ್ಧಿಸಿರುವ ಮರಿತಿಬ್ಬೇಗೌಡ ಅವರನ್ನು ಭಾರಿ ಮತಗಳ ಅಂತರದಿಂದ ಗೆಲ್ಲಿಸಬೇಕು. ಅವರು ಹಿಂದೆ ಹೆಚ್ಚಿನ ಅವಧಿಗೆ ಆಡಳಿತ ಪಕ್ಷದಲ್ಲಿ ಇಲ್ಲದಿದ್ದರೂ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಈ ಬಾರಿ ನಮ್ಮ ಪಕ್ಷವೇ ಅಧಿಕಾರದಲ್ಲಿರುವುದು ಅವರಿಗೆ ನೆರವಾಗಲಿದೆ’ ಎಂದರು.

ಕೆಪಿಸಿಸಿ ಮಹಿಳಾ ಘಟಕದ ಉಪಾಧ್ಯಕ್ಷೆ ಪುಷ್ಪವಲ್ಲಿ, ಮಾಜಿ ಮೇಯರ್‌ಗಳಾದ ಪುಷ್ಪಲತಾ ಚಿಕ್ಕಣ್ಣ, ಪುಷ್ಪಲತಾ ಜಗನ್ನಾಥ್, ಮೋದಾಮಣಿ, ರಾಜೇಶ್ವರಿ ಪುಟ್ಟಸ್ವಾಮಿ, ಮೈಸೂರು ಜಿಲ್ಲಾ ಗ್ರಾಮಾಂತರ ಮಹಿಳಾ ಅಧ್ಯಕ್ಷ ಲತಾ ಸಿದ್ದಶೆಟ್ಟಿ, ಲತಾ ಮೋಹನ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.