ಬುಧವಾರ, 14 ಆಗಸ್ಟ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಡಾ ಕಚೇರಿಗೆ ಮುತ್ತಿಗೆ ಯತ್ನ: ಆರ್. ಅಶೋಕ ಪೊಲೀಸ್ ವಶಕ್ಕೆ

Published 12 ಜುಲೈ 2024, 8:24 IST
Last Updated 12 ಜುಲೈ 2024, 8:24 IST
ಅಕ್ಷರ ಗಾತ್ರ

ಮೈಸೂರು: ಮುಡಾ ಹಗರಣ ಖಂಡಿಸಿ ಮುಡಾ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಬಿಜೆಪಿಯ ನೂರಾರು ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದರು.

ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದ ವಿಪಕ್ಷ ನಾಯಕ ಆರ್. ಅಶೋಕ್, ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ, ಬಿಜೆಪಿ ಮುಖಂಡ ಯಶಸ್ವಿ ಸೋಮಶೇಖರ್ ಅವರನ್ನೂ ಪೊಲೀಸರು ನಗರದ ಕ್ರಾಫರ್ಡ್ ಭವನದ ಬಳಿ ವಶಕ್ಕೆ ಪಡೆದರು.

ಮಹಾರಾಜ ಕಾಲೇಜು ಮೈದಾನದ ಬಳಿ ಮಳೆಯ ನಡುವೆಯೇ ಪ್ರತಿಭಟನಾಕಾರರನ್ನು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ನೇತೃತ್ವದ ತಂಡವು ವಶಕ್ಕೆ ಪಡೆದು ಕರೆದೊಯ್ದಿತು.

ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಟಿ.ಎಸ್. ಶ್ರೀವತ್ಸ, ಬಿಜೆಪಿ ಮೈಸೂರು ಜಿಲ್ಲಾ ನಗರ ಘಟಕದ ಅಧ್ಯಕ್ಷ ಎಲ್. ನಾಗೇಂದ್ರ ಮೊದಲಾದ ಮುಖಂಡರನ್ನು ಪೊಲೀಸರು ಕೆಎಸ್ ಆರ್ ಟಿಸಿ ಬಸ್ ನಲ್ಲಿ ಕರೆದೊಯ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT