ಪ್ರಜಾವಾಣಿ ವಾರ್ತೆ

ನಂಜನಗೂಡು: ‘ರೈತರು ತಾವು ಪಡೆದ ಸಾಲವನ್ನು ಸಕಾಲದಲ್ಲಿ ಮರು ಪಾವತಿ ಮಾಡುವ ಮೂಲಕ ಸಂಘದ ಅಭಿವೃದ್ಧಿಗೆ ಸಹಕಾರ ನೀಡಬೇಕು’ ಎಂದು ಸಂಘದ ಅಧ್ಯಕ್ಷ ಎಚ್.ಎಸ್ ದೇವಣ್ಣ ತಿಳಿಸಿದರು.

ತಾಲ್ಲೂಕಿನ ಶಿರಮಳ್ಳಿ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.

‘ಸಕಾಲದಲ್ಲಿ ಸಾಲ ಮರುಪಾವತಿ ಮಾಡುವುದರಿಂದ ಉಳಿದ ಸದಸ್ಯರಿಗೆ ಸಾಲ ಸೌಲಭ್ಯ ನೀಡಲು ಅನುಕೂಲವಾಗುತ್ತದೆ. ಸಂಘದಿಂದ ಸಿಗುವ ಸೌಲಭ್ಯಗಳನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಣಾಧಿಕಾರಿ ಎಸ್ .ಎಂ ಮಲ್ಲಿಕಾರ್ಜುನ ಸ್ವಾಮಿ, ಉಪಾಧ್ಯಕ್ಷ ಸ್ವಾಮಿ ಶೆಟ್ಟಿ, ನಿರ್ದೇಶಕರುಗಳಾದ ಎಸ್. ಎಸ್ ಮಹೇಶ್, ಎಸ್. ಶಿವಪಾದು, ಎನ್ .ಮಹದೇವು, ಎಸ್. ಪಿ ಸಂಗಪ್ಪ, ಗಣೇಶ್, ಸಿದ್ದನಾಯ್ಕ, ಬೀರೇಗೌಡ, ವಿಜಯಾಂಬ, ಸುಂದ್ರಮ್ಮ, ಗ್ರಾ.ಪಂ ಸದಸ್ಯ ಪ್ರಭು, ಎಂ. ಶಿವನಂಜಪ್ಪ, ಭೋಗನಂಜಪ್ಪ, ವಿರೂಪಾಕ್ಷಪ್ಪ ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.