ಸರಗೂರು: ‘ಆಯುರ್ವೇದದಿಂದ ರೋಗ ಮುಕ್ತವಾಗಿಸಿ ಮಾನವನ್ನಾಗಿ ಮಾಡುವುದು ಸವಿತಾ ಮಹರ್ಷಿ ನೀಡಿದ ಕೊಡುಗೆಯಾಗಿದೆ’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಮಲ್ಲೇಶ್ ಹೇಳಿದರು.

ತಾಲ್ಲೂಕು ಆಡಳಿತ, ಸವಿತಾ ಸಮಾಜದಿಂದ ತಾಲ್ಲೂಕು ಕಚೇರಿಯಲ್ಲಿ ಬುಧವಾರ ನಡೆದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸವಿತಾ ಮಹರ್ಷಿ ಆದರ್ಶ– ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಬೇಕು. ಶಿಕ್ಷಣ ಪಡೆಯುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು’ ಎಂದು ತಿಳಿಸಿದರು.

‘ಜಗತ್ತು ರಕ್ಷಿಸಿ ನಡೆಸುವವನೇ ಸವಿತಾ ಎಂಬುದು ಪುರಾಣಗಳಲ್ಲಿ ಉಲ್ಲೇಖವಾಗಿದೆ’ ಎಂದರು.

ಸವಿತಾ ಸಮಾಜದ ತಾಲ್ಲೂಕು ಅಧ್ಯಕ್ಷ ನರಸಿಂಹ ಮಾತನಾಡಿ, ‘ಮುಂದೆ ಸವಿತಾ ಮಹರ್ಷಿ ಜಯಂತಿಯನ್ನು ಸಮಾಜದಿಂದ ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸಿ ಆಚರಿಸಲಾಗುವುದು. ಜೆಡಿಎಸ್–ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವಿದ್ದಾಗ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಲು ಆದೇಶಿಸಿದ್ದಕ್ಕೆ ಅಭಿನಂದನೆ ಸಲ್ಲಿಸುತ್ತೇವೆ’ ಎಂದು ಹೇಳಿದರು.

ತಹಶೀಲ್ದಾರ್ ಚಲುವರಾಜು ಮಾತನಾಡಿ, ‘18 ವರ್ಷ ತುಂಬಿದವರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸಬೇಕು. ಗುರುತಿನ ಚೀಟಿ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಸವಿತಾ ಸಮಾಜದ ತಾಲ್ಲೂಕು ಘಟದ ಅಧ್ಯಕ್ಷ ನರಸಿಂಹ, ಹಡಪದ ಅಪ್ಪಣ್ಣ ಸವಿತಾ ಸಮಾಜದ ಅಧ್ಯಕ್ಷ ಬಸವರಾಜು, ಗೌರವಾಧ್ಯಕ್ಷ ದಡದಹಳ್ಳಿ ಶ್ರೀನಿವಾಸ್, ಕಾರ್ಯದರ್ಶಿ ಪ್ರಭಾಕರ್, ಖಜಾಂಚಿ ಕಾಳಶೆಟ್ಟಿ, ಸಹ ಕಾರ್ಯದರ್ಶಿ ನಿಂಗರಾಜು, ಮಹೇಶ್, ಜಯರಾಮ್, ಗೋವಿಂದರಾಜ್, ಸರ್ಕಲ್ ಇನ್‌ಸ್ಪೆಕ್ಟರ್ ಎಂ.ಲಕ್ಷ್ಮಿಕಾಂತ, ಪಿಎಸ್‌ಐ ಶ್ರವಣದಾಸ ರೆಡ್ಡಿ, ಗ್ರೇಡ್-2 ತಹಶೀಲ್ದಾರ್ ಪರಶಿವಮೂರ್ತಿ, ಡಿ.ಟಿ. ಸುನೀಲ್, ಹರೀಶ್, ಮುಜೀಬ್, ಹೇಮಂತ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.