ಮೈಸೂರು: ‘ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಫೆ.19ರಂದು ಮಧ್ಯಾಹ್ನ 12ಕ್ಕೆ ನಗರದ ಕಲಾಮಂದಿರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಗೋಪಾಲರಾವ್ ಜಾಧವ್ ಹೇಳಿದರು.

ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಉದ್ಘಾಟಿಸುವರು. ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮೇಯರ್ ಶಿವಕುಮಾರ್, ಸಂಸದರಾದ ಪ್ರತಾಪ್ ಸಿಂಹ, ವಿ.ಶ್ರೀನಿವಾಸ್ ಪ್ರಸಾದ್, ಸುಮಲತಾ ಅಂಬರೀಷ್ ಭಾಗವಹಿಸುವರು ಎಂದು ತಿಳಿಸಿದರು.

‘ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಬೆಳಿಗ್ಗೆ 10 ಗಂಟೆಗೆ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಮುಂಭಾಗದಿಂದ ಮೆರವಣಿಗೆಯು ಕೆ.ಆರ್‌ವೃತ್ತ, ಡಿ.ದೇವರಾಜು ಅರಸು ರಸ್ತೆ ಮಾರ್ಗವಾಗಿ ಜೆಎಲ್‌ಬಿ ರಸ್ತೆ, ಮೆಟ್ರೋಪೋಲ್ ವೃತ್ತ, ಹುಣಸೂರು ರಸ್ತೆ ಮೂಲಕ ಕಲಾಮಂದಿರ ತಲುಪಲಿದೆ. ಶ್ರೀಕಂಠರಾವ್ ಮತ್ತು ತಂಡದಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದರು.

ಮುಖಂಡರಾದ ಕೇಶವ್‌ರಾವ್, ರಾಜೇಶ್, ಸುರೇಶ್‌ಬಾಬು, ಮಹದೇವ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.