ಮೈಸೂರು: ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ. ಸಿ.ಎಂ. ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಮಂಗಳವಾರ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರನ್ನು ಭೇಟಿ ಮಾಡಿದ ಸಂದರ್ಭ ಪತ್ರಕರ್ತರ ಜೊತೆ ಅವರು ಮಾತನಾಡಿದರು. ' ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿ ಇರುತ್ತಾರೋ, 3 ವರ್ಷ ಇರುತ್ತಾರೋ ಎನ್ನುವುದನ್ನು ಪಕ್ಷದ ಹೈಕಮಾಂಡ್ ನಲ್ಲಿ ಕೇಳಬೇಕು. ಸದ್ಯಕ್ಕಂತೂ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ' ಎಂದರು.

'ಬೆಂಬಲಿಗರು ತಮ್ಮ ನಾಯಕರ ಪರ ಘೋಷಣೆ ಕೂಗುವುದು ಸಾಮಾನ್ಯ. ಅದನ್ನೇ ಇಟ್ಟುಕೊಂಡು ಏನೋ ಬದಲಾವಣೆ ಆಗುತ್ತದೆ ಎಂದು ಹೇಳುವುದು ಸರಿಯಲ್ಲ. ವಿಪಕ್ಷಗಳೂ ಪ್ರೀತಿಯಿಂದ ನನ್ನ ಹೆಸರು ಹೇಳುತ್ತಿರಬಹುದು. ಆದರೆ ಪಕ್ಷದಲ್ಲಿ ಆ ರೀತಿಯ ಯಾವ ಬೆಳವಣಿಗೆಯೂ ಆಗಿಲ್ಲ' ಎಂದರು.

ಮಹದೇವಪ್ಪ ಜೊತೆ ಮಾತುಕತೆ ಕುರಿತು ಪ್ರತಿಕ್ರಿಯಿಸಿ ' ರಾಜಕಾರಣಿಗಳು ಸೇರಿದ ಮೇಲೆ ರಾಜಕಾರಣದ ಚರ್ಚೆ ಸಾಮಾನ್ಯ. ಇವತ್ತಿನ ಭೇಟಿಯಲ್ಲಿ ಮಹತ್ವದ ವಿಚಾರವೇನೂ ಇಲ್ಲ. ಇಡೀ ದಿನ ಮೈಸೂರಿನಲ್ಲಿ ಇದ್ದು ದಸರಾ ನೋಡುತ್ತೇನೆ ಅಷ್ಟೇ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.