ಮೈಸೂರು: ‘ಮೈಸೂರು ಹಾಗೂ ಚಾಮರಾಜನಗರ ಒಳಗೊಂಡು ರೇಷ್ಮೆ ಮಾರುಕಟ್ಟೆ ಆರಂಭಿಸುವ ಚಿಂತನೆ ಸಹ ಇದೆ’ ಎಂದು ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವ ಕೆ. ವೆಂಕಟೇಶ್ ಹೇಳಿದರು.

ಸಚಿವರಾದ ನಂತರ ಮೊದಲ ಬಾರಿಗೆ ಶನಿವಾರ ನಗರಕ್ಕೆ ಬಂದ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

‘ಜಿಲ್ಲೆಯವರೇ ಆದ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದು, ಅವರನ್ನು ಸಮರ್ಥವಾಗಿ ಬಳಸಿಕೊಂಡು ಜಿಲ್ಲೆಯ ಹಾಗೂ ಅಕ್ಕಪಕ್ಕದ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು. ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಭಾಗದಲ್ಲಿ ರೇಷ್ಮೆ ಕೃಷಿಯನ್ನು ಹೆಚ್ಚಾಗಿ ಮಾಡಲಾಗುತ್ತದೆ. ಹುಣಸೂರು, ಪಿರಿಯಾಪಟ್ಟಣ, ಎಚ್.ಡಿ ಕೋಟೆ ಭಾಗಗಳಲ್ಲಿ ಹೊಗೆಸೊಪ್ಪು ಬೆಳೆಯಲಾಗುತ್ತದೆ. ಇಲ್ಲಿಯೂ ರೇಷ್ಮೆ ಬೆಳೆಗೆ ಉತ್ತೇಜನ ನೀಡಿ ರೈತರ ಸಬಲೀಕರಣಕ್ಕೆ ಒತ್ತು ನೀಡಲಾಗುವುದು’ ಎಂದರು.

‘ರಾಜ್ಯದಲ್ಲಿ ಹಾಲು ಉತ್ಪಾದನೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಪಶುಸಂಗೋಪನೆಗೆ ಇನ್ನಷ್ಟು ಉತ್ತೇಜನ ನೀಡಲಾಗುವುದು. ಪಶುಭಾಗ್ಯ ಯೋಜನೆ ಜಾರಿಯಲ್ಲಿದೆ. ಆದರೆ, ಹಣಕಾಸಿನ ಕೊರತೆ ಇದ್ದು, ಹೆಚ್ಚಿನ ಅನುದಾನ ಪಡೆಯಲಾಗುವುದು. ಸಿಬ್ಬಂದಿ ಕೊರತೆ ಇರುವುದರಿಂದ ಸಮರ್ಪಕ ಸೇವೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸಿಬ್ಬಂದಿ ಕೊರತೆ ನೀಗಿಸಿ ಇಲಾಖೆಗೆ ಶಕ್ತಿ ತುಂಬಲಾಗುವುದು. ಪಶುಗಳಿಗೆ ಔಷಧಿ, ಆರೋಗ್ಯ ಸೇವೆ ನೀಡಲಾಗುವುದು’ ಎಂದು ತಿಳಿಸಿದರು.

ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಬಿ.ಜೆ. ವಿಜಯ್ ಕುಮಾರ್, ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್. ಮೂರ್ತಿ, ಕಾಂಗ್ರೆಸ್ ನಗರ ಪ್ರಧಾನ ಕಾರ್ಯದರ್ಶಿ ಶಿವಣ್ಣ, ಮುಖಂಡ ಬಿ.ಎಂ. ರಾಮು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.