ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗಿರುವುದರಿಂದ ಅವರು ಯಾವುದೇ ಸರ್ಕಾರಿ ಆದೇಶಗಳಿಗೆ, ಪತ್ರಗಳಿಗೆ ಸಹಿ ಹಾಕಬಾರದು. ದಸರಾ ಉದ್ವಾಟನೆಯಲ್ಲಿ ಪಾಲ್ಗೊಳ್ಳಬಾರದುಪ್ರಲ್ಹಾದ ಜೋಶಿ, ಕೇಂದ್ರ ಸಚಿವ
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಗಮನಿಸಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಮುಡಾ ಪ್ರಕರಣ ಸಣ್ಣದುಡಾ.ಶರಣಪ್ರಕಾಶ್ ಪಾಟೀಲ, ಉನ್ನತ ವೈದ್ಯಕೀಯ ಶಿಕ್ಷಣ ಖಾತೆ ಸಚಿವ
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಸಲಹೆಯನ್ನು ಗೌರವಿಸುತ್ತೇವೆ. ಆದರೆ, ಕೇಂದ್ರ ಸಚಿವರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರ ರಾಜೀನಾಮೆಯನ್ನೂ ಕೇಳಲಿ ಎ.ಎಸ್.ಪೊನ್ನಣ್ಣ, ಮುಖ್ಯಮಂತ್ರಿ ಕಾನೂನು ಸಲಹೆಗಾರ
ಈ ಹಿಂದೆ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆರೋಪ ಕೇಳಿಬಂದಾಗ, ನೈತಿಕತೆಯ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದರು. ಈಗ ಅವರ ನೈತಿಕತೆ ಎಲ್ಲಿ ಹೋಗಿದೆಅಭಯ ಪಾಟೀಲ, ಶಾಸಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.