ಮೈಸೂರು: ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ಅವರು ಕಾರ್ಯಕರ್ತರ ಬಲ ಪ್ರದರ್ಶನದ ನಡುವೆ ಬುಧವಾರ ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್ ಕಚೇರಿಯಿಂದ ಪ್ರಾದೇಶಿಕ ಆಯುಕ್ತರ ಕಚೇರಿಗೆ ಪಾದಯಾತ್ರೆಯಲ್ಲಿ ತೆರಳಿ ಅವರು ಮಧ್ಯಾಹ್ನ 12.30ಕ್ಕೆ ಉಮೇದುವಾರಿಕೆ ಸಲ್ಲಿಸಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಡಾ.ಎಚ್.ಸಿ.ಮಹಾದೇವಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಸೇರಿದಂತೆ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಸಾಥ್ ನೀಡಿದರು.

ಮೆರವಣಿಗೆಗೂ ಮುನ್ನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, 'ಈ ಚುನಾವಣೆಯನ್ನು ಕಾಂಗ್ರೆಸ್ ಸವಾಲಾಗಿ ಸ್ವೀಕರಿಸಿದೆ. ಬುದ್ಧಿವಂತ ಮತದಾರರು ಬಿಜೆಪಿಯನ್ನು ತಿರಸ್ಕರಿಸಿ, ನಮ್ಮ ಅಭ್ಯರ್ಥಿಯನ್ನು ಬೆಂಬಲಿಸಲಿದ್ದಾರೆ. ಗೆಲುವು ಪಡೆಯುತ್ತೇವೆ ಎಂದು ನೂರಕ್ಕೆ ನೂರು ವಿಶ್ವಾಸವಿದೆ' ಎಂದರು.

ಓದಿ...ಬೆಂಗಳೂರು: ಗೋಡೆಗಳ ಮೇಲೆ ‘Sorry’ ಬರಹ: ಸಿಸಿಟಿವಿಯಲ್ಲಿ ಇಬ್ಬರ ಗುರುತು ಪತ್ತೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.