ಮೈಸೂರು: ಪ್ರೊ.ಮಹೇಶಚಂದ್ರ ಗುರು ಹಾಗೂ ಪ್ರೊ.ಅರವಿಂದ ಮಾಲಗತ್ತಿ ಮೇಲಿನ ಅಮಾನತು ಆದೇಶವನ್ನು ಮೈಸೂರು ವಿಶ್ವವಿದ್ಯಾನಿಲಯ ರದ್ದುಗೊಳಿಸಿದೆ.

ಈಚೆಗೆ ನಡೆದಿರುವ ವಿ.ವಿ.ಯ ಸಿಂಡಿಕೇಟ್ ಸಭೆಯಲ್ಲಿ ಈ ತೀರ್ಮಾನವಾಗಿದೆ. ಇಬ್ಬರೂ ಪ್ರಾಧ್ಯಾಪಕರು ಕರ್ತವ್ಯಕ್ಕೆ ಹಾಜರಾಗುವಂತೆ ಕುಲಸಚಿವರು ಸೂಚನೆ ನೀಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರ ‘ಜನರಾಜಕಾರಣ ಪ್ರಚಾರಾಂದೋಲನ’ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಆರೋಪವನ್ನು ಇಬ್ಬರೂ ಪ್ರಾಧ್ಯಾಪಕರು ಎದುರಿಸುತ್ತಿದ್ದರು. ಚುನಾವಣಾ ಆಯೋಗದ ಸೂಚನೆಯ ಮೇರೆಗೆ ಜಿಲ್ಲಾಧಿಕಾರಿ ಶಿಸ್ತುಕ್ರಮ ತೆಗೆದುಕೊಳ್ಳುವಂತೆ ಮೈಸೂರು ವಿ.ವಿ.ಗೆ ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ನೀಡಿದ್ದ ಷೋಕಾಸ್ ನೋಟಿಸಿಗೆ ಉತ್ತರ ನೀಡದಿದ್ದ ಇಬ್ಬರನ್ನೂ ಅಮಾನತು ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.