ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಭ್ರೂಣಹತ್ಯೆ: ತನಿಖೆಗೆ ತಂಡ ರಚನೆ

Published 28 ನವೆಂಬರ್ 2023, 16:57 IST
Last Updated 28 ನವೆಂಬರ್ 2023, 16:57 IST
ಅಕ್ಷರ ಗಾತ್ರ

ಮೈಸೂರು: ‘ಭ್ರೂಣ ಹತ್ಯೆ ಜಾಲದಲ್ಲಿ ಮೈಸೂರಿನ ಆಸ್ಪತ್ರೆಗಳ ಪಾತ್ರದ ಕುರಿತು ವಸ್ತುಸ್ಥಿತಿ ತನಿಖೆಗಾಗಿ ತಂಡ ರಚಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ತಿಳಿಸಿದರು.

‘ಘಟನೆ ಕುರಿತು ಈಗಾಗಲೇ ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಾಥಮಿಕ ವರದಿ ನೀಡಿದ್ದಾರೆ. ನಗರ ಸ್ಥಳೀಯ ಸಂಸ್ಥೆಗಳು, ಪೊಲೀಸರು, ಆರೋಗ್ಯ ಇಲಾಖೆ ಹಾಗೂ ಆಯುಷ್‌ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ತಂಡವೊಂದನ್ನು ರಚಿಸಲಾಗುವುದು. ತಂಡವು ಜಿಲ್ಲೆಯ ಪ್ರತಿ ಆಸ್ಪತ್ರೆ, ಕ್ಲಿನಿಕ್‌ಗೆ ಭೇಟಿ ನೀಡಿ ಮಾನ್ಯತೆ, ವೈದ್ಯಕೀಯ ಅರ್ಹತೆ ಮತ್ತಿತರ ದಾಖಲೆಗಳನ್ನು ಪರಿಶೀಲಿಸಲಿದೆ’ ಎಂದು ಜಿಲ್ಲಾಧಿಕಾರಿ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

‘ಆಯುರ್ವೇದ, ಮೂಲವ್ಯಾದಿ, ಪೈಲ್ಸ್‌ ಚಿಕಿತ್ಸೆ ಹೆಸರಿನಲ್ಲಿ ಆರಂಭವಾಗುತ್ತಿರುವ ಸಣ್ಣ ಕ್ಲಿನಿಕ್‌ಗಳಲ್ಲಿ ಅನ್ಯ ರೀತಿಯ ಚಟುವಟಿಕೆಗಳು ನಡೆಯುತ್ತಿರುವುದು ಕಂಡುಬಂದಿದೆ. ಈಗ ಆರೋಪ ಕೇಳಿಬಂದಿರುವ ಎರಡು ಕ್ಲಿನಿಕ್‌ಗಳು ಕೆಪಿಎಂಎ ಅಡಿ ಅನುಮತಿ ಪಡೆದಿಲ್ಲ. ಏ‍ಪ್ರಿಲ್‌ ನಂತರ ಅವು ಬಾಗಿಲು ತೆರೆದಿಲ್ಲವೆಂದು ಅಧಿಕಾರಿಗಳು ಹೇಳಿದ್ದಾರೆ. ಅಲ್ಲಿ ಯಾವ ಚಟುವಟಿಕೆಗಳು ನಡೆಯುತ್ತಿದ್ದವು ಎಂಬುದರ ಕುರಿತು ಆರೋಗ್ಯ ಇಲಾಖೆ ಹಾಗೂ ಪೊಲೀಸರು ತನಿಖೆ ನಡೆಸಲಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT