ಎಚ್.ಡಿ.ಕೋಟೆ: ಪಟ್ಟಣದ ಮನೆಯೊಂದರ ಬಾಗಿಲನ್ನು ಗುರುವಾರ ರಾತ್ರಿ ಮುರಿದು ಒಳ ನುಗ್ಗಿದ ಕಳ್ಳರು ₹ 10 ಲಕ್ಷ ಮೌಲ್ಯದ ಚಿನ್ನಾಭರಣ, ₹ 45 ಸಾವಿರ ನಗದು ಕದ್ದೊಯ್ದಿದ್ದಾರೆ.

ಮುಸ್ಲಿಂ ಬ್ಲಾಕ್ ನಿವಾಸಿ ನ್ಯಾಯಬೆಲೆ ಅಂಗಡಿ ಮಾಲೀಕ ಮುಷರತ್ ಪಾಷಾ ಅವರ ಮನೆಯಲ್ಲಿ ಈ ಕಳ್ಳತನವಾಗಿದ್ದು, ಮುಷರತ್ ಹಾಗೂ ಸಹೋದರ ನೂರ್ ಅಹಮದ್ ಎರಡೂ ಕುಟುಂಬದವರು ಈಚೆಗೆ ಹೈದರಾಬಾದ್ ಪ್ರವಾಸಕ್ಕೆ ಹೋಗಿದ್ದರು. ಈ ವೇಳೆಯಲ್ಲಿ ಘಟನೆ ನಡೆದಿದ್ದು, ಸಿದ್ದಪ್ಪಾಜಿ ರಸ್ತೆಯ ಅರಳಿ ಮರದ ಬಳಿ ಆಧಾರ್ ಕಾರ್ಡ್ ಹಾಗೂ ವೋಟರ್ ಐಡಿ ಇತರ ದಾಖಲಾತಿಗಳನ್ನು ಬಿಸಾಡಿ ಹೋಗಿದ್ದಾರೆ. ಶುಕ್ರವಾರ ಅವರು ಮರಳಿ ಊರಿಗೆ ಬಂದಾಗ ವಿಷಯ ಗೊತ್ತಾಗಿದೆ.

ವೃತ್ತ ನಿರೀಕ್ಷಕ ಶಬ್ಬೀರ್ ಹುಸೈನ್, ಪಿಎಸ್‌ಐ ಪ್ರಕಾಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.