ಮೈಸೂರು: ‘ರೈತರು, ಮಠ ಹಾಗೂ ಸರ್ಕಾರಿ ಶಾಲೆಯ ಭೂಮಿಯನ್ನು ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನೋಂದಾಯಿಸಿ ಕಾಂಗ್ರೆಸ್ ಸರ್ಕಾರ ರೈತರನ್ನು ಕತ್ತಲೆಗೆ ದೂಡುತ್ತಿದೆ’ ಎಂದು ಆರೋಪಿಸಿ ಬಿಜೆಪಿ ನಗರ ಹಾಗೂ ಗ್ರಾಮಾಂತರ ಜಿಲ್ಲಾ ಘಟಕದ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು.

‘ನಮ್ಮ ಭೂಮಿ, ನಮ್ಮ ಹಕ್ಕು’ ಪ್ರತಿಭಟನಾ ಅಭಿಯಾನದ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರ ಹಾಗೂ ಸಚಿವ ಜಮೀರ್ ಅಹಮ್ಮದ್ ವಿರುದ್ಧ ಘೋಷಣೆ ಕೂಗಿದರು. ‘ಹಲವು ಪ್ರಕರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ’ ಎಂದು ಒತ್ತಾಯಿಸಿದರು.

‘ಪ್ರಾಣ ಕೊಟ್ಟೇವು, ಭೂಮಿ ಬಿಡೆವು’, ‘ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ’, ‘ಸಿಂದಗಿ ವಿರಕ್ತ ಮಠದ ಭೂಮಿ ನುಂಗಿದ ವಕ್ಫ್, ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ’, ‘ಅಲ್ಪಸಂಖ್ಯಾತ ಓಲೈಕೆಗಾಗಿ ರೈತರ ಬದುಕಿಗೆ ಕೊಳ್ಳಿಯಿಟ್ಟ ಸಿದ್ದರಾಮಯ್ಯಗೆ ಧಿಕ್ಕಾರ’, ‘ರೈತರ ಜಮೀನು ಕಬಳಿಸಿದ ವಕ್ಫ್ ಗೂಂಡಾಗಿರಿಗೆ ಧಿಕ್ಕಾರ’ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಟಿ.ಎಸ್.ಶ್ರೀವತ್ಸ ಮಾತನಾಡಿ, ‘ಜನ ವಕ್ಫ್ ಹೆಸರು ಕೇಳಿದಾಗ ಹೆದರುವ ವಾತಾವರಣವನ್ನು ಜಮೀರ್ ಅಹಮ್ಮದ್ ಖಾನ್ ಸೃಷ್ಟಿಸಿದ್ದಾರೆ. ರಾಜ್ಯದ ಜನರ ಮೇಲೆ ಕಾಂಗ್ರೆಸ್ ಸರ್ಕಾರ ತೊಂದರೆ ನೀಡುತ್ತಿದ್ದು, ವಕ್ಫ್ ಹೆಸರಿನಲ್ಲಿ ಆಸ್ತಿ ನೋಂದಣಿ ಅದರ ಮುಂದುವರಿದ ಭಾಗ. ಜನಸಾಮಾನ್ಯರಿಗೆ ಆಡಳಿತ ಪಕ್ಷ ನೀಡುತ್ತಿರುವ ನೋವಿಗೆ ಜನರೇ ಉತ್ತರ ನೀಡುತ್ತಾರೆ’ ಎಂದರು.

‘ಕೆ.ಆರ್. ಕ್ಷೇತ್ರದ ಶ್ರೀರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುನೇಶ್ವರ ನಗರದಲ್ಲಿನ ಸರ್ವೇ ನಂಬರ್ 153ರಲ್ಲಿ ವಕ್ಫ್ ಬೋರ್ಡ್ ಸುಮಾರು 12 ಎಕರೆ ಭೂಮಿಯನ್ನು ವಾಪಸ್ ಕೊಡುವಂತೆ ಕೇಳುತ್ತಿದೆ. ಇಲ್ಲಿ 173 ಮನೆಗಳಿದ್ದು, 800 ಜನ ವಾಸವಿದ್ದಾರೆ. ಹತ್ತಾರು ವರ್ಷಗಳಿಂದ ಜೀವನ ನಡೆಸುತ್ತಿರುವವರ ಭೂಮಿಗೆ ವಕ್ಫ್ ಬೋರ್ಡ್ ತೊಂದರೆ ನೀಡುತ್ತಿದ್ದು, ಮುನೇಶ್ವರ ನಗರದ ನಿವಾಸಿಗಳು ಖಾತೆಗಳ ಕಂದಾಯವನ್ನು ಕಟ್ಟಿದ್ದರೂ ಆತಂಕ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ವಕ್ಫ್ ಬೋರ್ಡ್ ಕಾಯ್ದೆ ತಿದ್ದುಪಡಿ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದೇವೆ. ರೈತರ ಜಮೀನನ್ನು, ಮಠಗಳ ಧಾರ್ಮಿಕ ನಂಬಿಕೆಗಳನ್ನು ಹಾಳು ಮಾಡುತ್ತಿರುವ ಹಾಗೂ ಬೆದರಿಕೆಯೊಡ್ಡುತ್ತಿರುವ ವಕ್ಫ್ ನಡೆಗೆ ಕಡಿವಾಣ ಹಾಕಬೇಕು. ರಾಜ್ಯ ಸರ್ಕಾರ ಅಧಿವೇಶನದಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಅಂಗೀಕರಿಸಿ ಕೇಂದ್ರಕ್ಕೆ ನಿರ್ಣಯ ಕಳುಹಿಸಬೇಕು’ ಎಂದು ಆಗ್ರಹಿಸಿದರು.

ಬಿಜೆಪಿ ನಗರ ಜಿಲ್ಲಾಧ್ಯಕ್ಷ ಎಲ್.ನಾಗೇಂದ್ರ, ಗ್ರಾಮಾಂತರ ಜಿಲ್ಲಾಧ್ಯಕ್ಷ ಮಹದೇವಸ್ವಾಮಿ, ರಾಜ್ಯ ಹಿಂದುಳಿದ ವರ್ಗಗಳ ಅಧ್ಯಕ್ಷ ಆರ್.ರಘು ಕೌಟಿಲ್ಯ, ಮಾಜಿ ಮೇಯರ್ ಶಿವಕುಮಾರ್, ಮುಖಂಡರಾದ ಸತೀಶ್ ಸಂದೇಶ್, ಹೇಮಂತ್ ಕುಮಾರ್, ಕೇಬಲ್ ಮಹೇಶ್, ಮಂಜುನಾಥ್, ಅನಿಲ್ ಥಾಮಸ್, ಗಿರಿಧರ್, ರಘು, ಹೇಮಾನಂದೀಶ್, ಸರ್ವಮಂಗಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.