ಎಚ್.ಡಿ.ಕೋಟೆ: ತಾಲ್ಲೂಕಿನ ಕೇರಳ ಗಡಿಭಾಗದ ಸಾರ್ವಜನಿಕರು ಝಿಕಾ ವೈರಸ್ ಹರಡುವ ಆತಂಕದಿಂದ ಭಯಭೀತರಾಗಿದ್ದಾರೆ.

ಗಡಿಭಾಗದ ಬಾವಲಿ ಚೆಕ್‌ಪೋಸ್ಟ್‌ನಲ್ಲಿ ತಾಲ್ಲೂಕು ಆರೋಗ್ಯ ಇಲಾಖೆ ತೀವ್ರ ನಿಗಾ ವಹಿಸಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

‘ಈಗಾಗಲೇ ಕೇರಳ ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಿ, ಕೇರಳ ರಾಜ್ಯದಿಂದ ಬರುತ್ತಿರುವ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಿ ಕೋವಿಡ್ ಪರೀಕ್ಷಾ ನೆಗೆಟಿವ್ ವರದಿಯನ್ನು ಪರಿಶೀಲಿಸಲಾಗುತ್ತಿದೆ. 2 ಡೋಸ್ ಲಸಿಕೆ ಪಡೆದವರಿಗೆ ಹಾಗೂ ಎರಡು ವರ್ಷದ ಮೇಲ್ಪಟ್ಟ ಮಕ್ಕಳನ್ನು ಮಾತ್ರ ಗಡಿಯೊಳಗೆ ಬಿಡಲಾಗುತ್ತಿದ್ದು. ಪ್ರತಿದಿನ ಪ್ರಯಾಣಿಕರ 80ಕ್ಕೂ ಹೆಚ್ಚು ವಾಹನಗಳನ್ನು ಮತ್ತು 100ಕ್ಕೂ ಹೆಚ್ಚು ಸರಕು ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಇನ್ನುಳಿದ ಯಾವುದೇ ವಾಹನಗಳ ಓಡಾಟವನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ’ ಎಂದು ತಾಲ್ಲೂಕು ಆರೋಗ್ಯ ಡಾ.ಟಿ.ರವಿಕುಮಾರ್ ತಿಳಿಸಿದರು.

ಕೋವಿಡ್ ಕಾರ್ಯಪಡೆ ಉಮೇಶ್, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಆರೋಗ್ಯ ಇಲಾಖೆಯ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.