ತಿ.ನರಸೀಪುರ: ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ, ಕಾವೇರಿ–ಕಬಿನಿ ಅಚ್ಚುಕಟ್ಟು ರೈತರ ರಕ್ಷಣೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿ ಹಾಗೂ ಬೆಂಗಳೂರು ಬಂದ್ ಬೆಂಬಲಿಸಿ ಕಾವೇರಿ–ಕಬಿನಿ ಹೋರಾಟ ಸಮಿತಿ ತಾಲ್ಲೂಕಿನ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಪಟ್ಟಣದಲ್ಲಿ ಮಂಗಳವಾರ ತಿ.ನರಸೀಪುರ ಬಂದ್‌ಗೆ ಕರೆ ನೀಡಿದೆ.

ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ ನಡೆಯಲಿದ್ದು, ಈಗಾಗಲೇ ಬಂದ್ ಬಗ್ಗೆ ಸಾರ್ವಜನಿಕರಿಗೆ ಪ್ರಚಾರ ಮಾಡಿ ಸಹಕರಿಸುವಂತೆ ಮನವಿ ಮಾಡಲಾಗಿದೆ. ಬೆಳಿಗ್ಗೆ 9 ಗಂಟೆಗೆ ಪಟ್ಟಣದ ವಿದ್ಯೋದಯ ವೃತ್ತದಲ್ಲಿ ಎಲ್ಲಾ ಪ್ರಮುಖರು ಸೇರಿ ನಂತರ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಆಟೊ ಸಂಘದವರು ಸಹಕರಿಸಿದ್ದು, ಬಹುತೇಕ ಸಾರಿಗೆ ವ್ಯವಸ್ಥೆ ಇರುವುದಿಲ್ಲ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಲು ಪೊಲೀಸ್ ಬಂದೊಬಸ್ತ್ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.