ಸರಗೂರು: ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಅ.22ರಂದು ನಡೆಯಲಿದ್ದು, ಗದ್ದುಗೆ ಏರಲು ಆಕಾಂಕ್ಷಿಗಳು ಕಾರ್ಯತಂತ್ರ ರೂಪಿಸುತ್ತಿದ್ದಾರೆ.

ಪಟ್ಟಣ ಪಂಚಾಯಿತಿಯಲ್ಲಿ 12 ಸ್ಥಾನಗಳಿದ್ದು, ಬಿಜೆಪಿ 6, ಜೆಡಿಎಸ್ 3, ಕಾಂಗ್ರೆಸ್ 2 ಹಾಗೂ ಒಬ್ಬರು ಪಕ್ಷೇತರ ಸದಸ್ಯರು ಇದ್ದಾರೆ.

ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗದ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿದೆ. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ರಾಧಿಕಾ, ಜೆಡಿಎಸ್ನಿಂದ ಚೈತ್ರಾ, ಪಕ್ಷೇತರ ಅಭ್ಯರ್ಥಿಯಾಗಿ ಹೇಮಾವತಿ ಆಕಾಂಕ್ಷಿ ಗಳಾಗಿದ್ದಾರೆ. ಮೇಲ್ನೋಟಕ್ಕೆ ಬಿಜೆಪಿ ಪರ ಬಹುಮತ ಕಂಡು ಬಂದಿದ್ದರೂ ಉಳಿದ ಎರಡು ಪಕ್ಷಗಳು ಮೈತ್ರಿಯಾಗುವ ಸಾಧ್ಯತೆಗಳಿವೆ. ಇದರಿಂದ ಗೆಲುವು ಯಾರ ಪಾಲಾಗುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮೀಸಲು ಕ್ಷೇತ್ರಕ್ಕೆ ಇರುವ ಕಾರಣ ಸ್ಪರ್ಧಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಬಿಜೆಪಿಯ ವಿನಯ್, ಜೆಡಿಎಸ್ನ ಎಸ್.ಎಲ್.ರಾಜಣ್ಣ ಮತ್ತು ಕಾಂಗ್ರೆಸ್ನ ಶ್ರೀನಿವಾಸ್ ನಾಮಪತ್ರ ಸಲ್ಲಿಸಿದ್ದಾರೆ.

ನೂತನ ತಾಲ್ಲೂಕಿನಲ್ಲಿ ಪ್ರಾಬಲ್ಯ ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಯಾರ ರಾಜಕೀಯ ಅನುಭವ
ಇಲ್ಲಿ ಫಲಕೊಡಲಿದೆ ಎಂಬುದು ತಾಲ್ಲೂಕಿನ ಜನತೆಯಲ್ಲಿ ಕುತೂಹಲ ಮೂಡಿಸಿದೆ.

‘ಪಟ್ಟಣ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಫಲಿತಾಂಶ ಮಧ್ಯಾಹ್ನ 12.30ಕ್ಕೆ ಹೊರ ಬೀಳಲಿದೆ’ ಎಂದು ತಹಶೀಲ್ದಾರ್ ಚಲುವರಾಜು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.