ತಿ.ನರಸೀಪುರ: ತಾಲ್ಲೂಕು ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾಗಿ ಜಿ.ಮಹೇಶ್ ಹಾಗೂ ಕಾರ್ಯದರ್ಶಿಯಾಗಿ ಎಂ.ವಿ.ಮಹದೇವಸ್ವಾಮಿ ಆಯ್ಕೆಯಾದರು.

ತಾಲ್ಲೂಕಿನ ವಾಟಾಳು ಮಠಾಧ್ಯಕ್ಷ ಡಾ.ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಪದಾಧಿಕಾರಿಗಳ, ಸದಸ್ಯರ ಸಭೆಯಲ್ಲಿ ಹಿಂದಿನ ಅಧ್ಯಕ್ಷರು, ಕಾರ್ಯದರ್ಶಿಗಳು ನೌಕರ ವೃತ್ತಿ ನಿವೃತ್ತರಾದ ಹಿನ್ನಲೆಯಲ್ಲಿ ನೂತನ ಅಧ್ಯಕ್ಷ ಕಾರ್ಯದರ್ಶಿಗಳ ಆಯ್ಕೆ ನಡೆಯಿತು.

ಸ್ವಾಮೀಜಿಯವರು ಮಾತನಾಡಿ, ‘ಹೊಸ ಕಾರ್ಯಕಾರಿ ಸಮಿತಿಯನ್ನು ರಚಿಸಿಕೊಂಡು ಸಂಘದಲ್ಲಿ ಉತ್ತಮ ಕಾರ್ಯ ಚಟುವಟಿಕೆಗಳ ಮೂಲಕ ನೌಕರರ ಪ್ರಗತಿಗೆ ಶ್ರಮಿಸಬೇಕು’ ಎಂದು ಸಲಹೆ ನೀಡಿದರು.

ವೀರಶೈವ ಮುಖಂಡ ಕೆಬ್ಬೆಹುಂಡಿ ಶಿವಕುಮಾರ್, ನಿಕಟ ಪೂರ್ವ ಅಧ್ಯಕ್ಷ ಪುಟ್ಟಬುದ್ಧಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎನ್.ಪ್ರಸಾದ್, ಮೂಗೂರು ಕುಮಾರಸ್ವಾಮಿ, ಸಂಘದ ಸದಸ್ಯರಾದ ದೇವಣ್ಣ, ನಂದೀಶ್, ಮಹದೇವಸ್ವಾಮಿ, ಶೇಖರ್ ಮೂರ್ತಿ, ನಾಗರಾಜಪ್ಪ, ಸುನಿಲ್ ಸಿಆರ್‌ಪಿ ಸಿದ್ಧಮಲ್ಲಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.