ತಿ.ನರಸೀಪುರ: ತಾಲ್ಲೂಕಿನ ಮೂಗೂರು ಗ್ರಾಮ ಪಂಚಾಯಿತಿಯಲ್ಲಿ ವಿಧಾನಸಭಾ ಚುನಾವಣೆ ಅಂಗವಾಗಿ ಸ್ವೀಪ್ ವತಿಯಿಂದ ಸಂಜೀವಿನಿ ಒಕ್ಕೂಟದ ಮಹಿಳೆಯರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೇಣದಬತ್ತಿ ಮೆರವಣಿಗೆ ನಡೆಸಿ, ಮಾನವ ಸರಪಳಿ ನಿರ್ಮಿಸುವ ಮೂಲಕ ಸಾರ್ವಜನಿಕರಿಗೆ ಕಡ್ಡಾಯ ಮತದಾನ ಮಾಡುವಂತೆ ಇತ್ತೀಚೆಗೆ ಅರಿವು ಮೂಡಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ ಮಾತನಾಡಿ, ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ನಮ್ಮ ಹಕ್ಕು, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ತಪ್ಪದೆ ಮೇ 10 ರಂದು ಕಡ್ಡಾಯವಾಗಿ ಮತದಾನ ಮಾಡಬೇಕು. ಅತೀ ಹೆಚ್ಚು ಮತದಾನ ಆಗುವಂತೆ ಮಾಡಬೇಕು. ಪ್ರಜಾಪ್ರಭುತ್ವದ ಏಳಿಗೆಗೆ ಕೈ ಜೋಡಿಸಬೇಕು’ ಎಂದು ತಿಳಿಸಿದರು.

ಸಹಾಯಕ ನಿರ್ದೇಶಕರಾದ (ನರೇಗಾ) ಶಶಿಕುಮಾರ್, ಸಿಡಿಪಿಒ ಭವ್ಯಾ, ಪಿಡಿಒ ಪೂರ್ಣಿಮಾ, ಎಸ್ಡಿಎ, ತಾಲ್ಲೂಕು ಐಇಸಿ ಸಂಯೋಜಕರು, ಎನ್ಆರ್ಎಲ್ಎಂ ಸಿಬ್ಬಂದಿ, ಬಿಎಫ್ಟಿ, ಸಂಜೀವಿನಿ ಒಕ್ಕೂಟದ ಮಹಿಳೆಯರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.