ಮೈಸೂರು/ಎಚ್.ಡಿ. ಕೋಟೆ: ‘ಕಬಿನಿ ಜಲಾಶಯದ ಉದ್ಯಾನವನ್ನು ಪ್ರವಾಸಿ ತಾಣವಾಗಿಸುವ ನಿಟ್ಟಿನಲ್ಲಿ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ (ಪಿಪಿಪಿ) ಅಭಿವೃದ್ಧಿಪಡಿಸುವ ಯೋಜನೆಯನ್ನು ನಾನೇ ಘೋಷಿಸಿದ್ದೆ. ಆದರೆ, ಪಾಲ್ಗೊಳ್ಳಲು ಯಾರೂ ಮುಂದೆ ಬಂದಿರಲಿಲ್ಲ. ಮತ್ತೆ ಆ ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಎಚ್.ಡಿ. ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸೋಮವಾರ ಬಾಗಿನ ಅರ್ಪಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
.ಸಿದ್ದರಾಮಯ್ಯ ಕಾಲ್ಗುಣ ಸರಿ ಇಲ್ಲ ಎನ್ನುತ್ತಿದ್ದರು, ಈಗ ನೋಡಿ ಏನಾಗಿದೆ? ಡಿಕೆಶಿ.
‘ಸರಗೂರು ಪ್ರತ್ಯೇಕ ತಾಲ್ಲೂಕು ಘೋಷಿಸಿದ್ದೂ ನಾನೇ. ಅಲ್ಲಿಗೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸಲಾಗುವುದು’ ಎಂದು ತಿಳಿಸಿದರು.

‘ಕಾವೇರಿ ಜಲಾನಯನ ಪ್ರದೇಶದ ನಾಲ್ಕೂ ಜಲಾಶಯಗಳು (ಕೆಆರ್ಎಸ್, ಕಬಿನಿ, ಹೇಮಾವತಿ ಹಾಗೂ ಹಾರಂಗಿ) ಭರ್ತಿಯಾಗಿವೆ. ಇವೆಲ್ಲವೂ ಸೇರಿದರೆ ಒಟ್ಟು 114 ಟಿಎಂಸಿ ನೀರು ಸಂಗ್ರಹ ಆದಂತಾಗುತ್ತದೆ. 66 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಅದಕ್ಕೆ ನೀರಾವರಿ ಕಲ್ಪಿಸಲು ಅನುಕೂಲವಾಗಿದೆ’ ಎಂದರು.
.ಕೇಂದ್ರದಿಂದ ಕರ್ನಾಟಕಕ್ಕೆ ಅತಿ ಹೆಚ್ಚು ಅನ್ಯಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ.
ಈ ವರ್ಷ ಬಿಕ್ಕಟ್ಟು ಉದ್ಭವಿಸದು:

‘ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ತಮಿಳುನಾಡಿಗೆ ಜೂನ್ ಹಾಗೂ ಜುಲೈ ತಿಂಗಳಲ್ಲಿ 40 ಟಿಎಂಸಿ ನೀರು ಹರಿಸಬೇಕಾಗಿತ್ತು. ಈ ಬಾರಿ ಕಾವೇರಿ ಜಲಾನಯನ ಪ್ರದೇಶದಿಂದ 83 ಟಿಎಂಸಿ ನೀರನ್ನು ಹರಿಸಲಾಗಿದೆ. ವರುಣನ ಕೃಪೆಯಿಂದಾಗಿ ಈ ಬಾರಿ ಕಾವೇರಿ ನೀರಿನ ಬಿಕ್ಕಟ್ಟು ಉದ್ಭವಿಸುವುದಿಲ್ಲ; ಎರಡೂ ರಾಜ್ಯಗಳ ನಡುವೆ ವಿವಾದ ಬರುವುದಿಲ್ಲ’ ಎಂದು ಆಶಯ ವ್ಯಕ್ತಪಡಿಸಿದರು.

‘ಕಾವೇರಿ ಜಲಾನಯನ ಪ್ರದೇಶದೊಂದಿಗೆ ರಾಜ್ಯದ ಇತರ ಕಡೆಗಳಲ್ಲೂ ಜಲಾಶಯಗಳು ತುಂಬಿವೆ. ಮಳೆಯಾದರೆ ಸಮೃದ್ಧಿಯಾಗುತ್ತದೆ. ರೈತರು ಚೆನ್ನಾಗಿದ್ದರೆ ನಾಡು ಕೂಡ ಚೆನ್ನಾಗಿರುತ್ತದೆ. ಆಗ ಸರ್ಕಾರವೂ ಚೆನ್ನಾಗಿರುತ್ತದೆ’ ಎಂದು ಹೇಳಿದರು.
.ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ.
ಕೃಷಿಗೆ, ನೀರಿಗೆ ತೊಂದರೆ ಆಗದು:

‘ಕಬಿನಿ ಜಲಾಶಯದ ಗರಿಷ್ಠ ಸಂಗ್ರಹ ಸಾಮರ್ಥ್ಯ 19 ಟಿಎಂಸಿ. ಅಷ್ಟೂ ತುಂಬಿದೆ. ಈ ವರ್ಷ ಈವರೆಗೆ ವಾಡಿಕೆಗಿಂತಲೂ ಶೇ 30ರಷ್ಟು ಜಾಸ್ತಿ ಮಳೆಯಾಗಿದೆ. ನಾನು 3ನೇ ಬಾರಿ ಇಲ್ಲಿಗೆ ಬಾಗಿನ ಅರ್ಪಿಸುತ್ತಿದ್ದೇನೆ. ಜಲಾಶಯ ಭರ್ತಿ ಆಗಿರುವುದರಿಂದ ಅಚ್ಚುಕಟ್ಟು ಪ್ರದೇಶದ 1.30 ಲಕ್ಷ ಹೆಕ್ಟೇರ್ ಪ್ರದೇಶದ ನೀರಾವರಿಗೆ ಅನುಕೂಲವಾಗುತ್ತದೆ. ಇದು ರೈತರಿಗೆ ಹರ್ಷ ತಂದಿದೆ. ವ್ಯವಸಾಯಕ್ಕೆ ತೊಂದರೆ ಆಗುವುದಿಲ್ಲ. ಮುಖ್ಯವಾಗಿ ಕುಡಿಯುವ ನೀರಿಗೆ ಕೊರತೆ ಉಂಟಾಗುವುದಿಲ್ಲ’ ಎಂದು ತಿಳಿಸಿದರು.

ನಮ್ಮೆಲ್ಲರ ಗೌರವ ಉಳಿಸಿದ ಕಬಿನಿ:

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ‘ಕಬಿನಿ ನಮ್ಮೆಲ್ಲರ ಗೌರವವನ್ನು ಉಳಿಸಿದೆ. ಸಂಕಷ್ಟ ಕಾಲದಲ್ಲಿ ಕಾಪಾಡಿದ ಕಬಿನಿಗೆ ಸರ್ಕಾರದ ಕೋಟಿ ವಂದನೆಗಳನ್ನು ಸಲ್ಲಿಸುತ್ತೇನೆ’ ಎಂದರು.

‘ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿಲ್ಲದೆ ಇದ್ದಾಗ, ಕಾವೇರಿ ನೀರು ಹರಿಸಬೇಕು ಎನ್ನುವ ತೀರ್ಪು ಬಂದಾಗ, ಎಲ್ಲ ಸಂಕಷ್ಟ ಕಾಲದಲ್ಲೂ ಕಪಿಲಾ ನದಿಯಿಂದ ನೀರನ್ನು ಹರಿಸಲಾಗಿದೆ. ಕಳೆದ ವರ್ಷ ಕಬಿನಿಯಲ್ಲಿ ನೀರಿರಲಿಲ್ಲ. ಈ ಬಾರಿ ಮೈತುಂಬಿದೆ’ ಎಂದು ಸಂತಸ ವ್ಯಕ್ತಪಡಿಸಿದರು.
.ಮೇಕೆದಾಟು ಯೋಜನೆಗೆ ಕೇಂದ್ರದಿಂದ ಎಚ್.ಡಿ.ಕೆ. ಅನುಮತಿ ಕೊಡಿಸಲಿ: ಸಿದ್ದರಾಮಯ್ಯ.
ಮಧ್ಯಾಹ್ನ 3ಕ್ಕೆ ಕಾರ್ಯಕ್ರಮ ನಿಗದಿಯಾಗಿತ್ತು. ಆಗಾಗ ಮಳೆ, ಬಿಸಿಲು ಹಾಗೂ ಮೋಡದ ವಾತಾವರಣದಲ್ಲಿ ಹೂವಿನ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದ ಜಲಾಶಯದ ಮೇಲ್ಭಾಗದಲ್ಲಿ ಸಂಭ್ರಮ ಮನೆ ಮಾಡಿತ್ತು. ಸಿಎಂ, ಡಿಸಿಎಂ ಹಾಗೂ ಜನಪ್ರತಿನಿಧಿಗಳು ಸುಮಾರು 4.40ರ ಸುಮಾರಿಗೆ ಬಂದರು. ಅವರಿಗೆ ಪೂರ್ಣಕುಂಭ ಹಾಗೂ ಚಂಡೆ ವಾದನದ ಮೂಲಕ ಸ್ವಾಗತ ನೀಡಲಾಯಿತು.

ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ಹಾಗೂ ಎಚ್.ಡಿ. ಕೋಟೆ ತಾಲ್ಲೂಕಿನ ಕಿತ್ತೂರ ಗ್ರಾಮದ ರವಿರಾಮೇಶ್ವರ ದೇವಸ್ಥಾನದ ಅರ್ಚಕ ಭಾಸ್ಕರ್ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮ ನೆರವೇರಿತು. ಜನಪ್ರತಿನಿಧಿಗಳ ನಂತರ ಅಧಿಕಾರಿಗಳು ಕೂಡ ಜಲಾಶಯಕ್ಕೆ ಬಾಗಿನ ಅರ್ಪಿಸಿ ನಮಿಸಿದರು.
.ಕಬಿನಿಗೆ CM ಸಿದ್ದರಾಮಯ್ಯ, DCM ಡಿ.ಕೆ ಶಿವಕುಮಾರ್ ಬಾಗಿನ ಅರ್ಪಣೆ.
ಹಕ್ಕುಪತ್ರ ಕೊಡಿ: ಶಾಸಕ ಅನಿಲ್ ಮನವಿ

ಬಾಗಿನ ಸಲ್ಲಿಸಿದ ನಂತರ ಸಿಎಂ, ಡಿಸಿಎಂ ಹಾಗೂ ಸಚಿವರನ್ನು ಎಚ್.ಡಿ. ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಸನ್ಮಾನಿಸಿದರು.

‘ಕಬಿನಿ ಜಲಾಶಯ ನಿರ್ಮಾಣಕ್ಕೆ ಬಂದ ಕೂಲಿ ಕಾರ್ಮಿಕರು ಅತಂತ್ರರಾಗಿದ್ದಾರೆ. ಕೂಲಿ ಮಾಡಿ ಜೀವನ ನಡೆಸುತ್ತಿದ್ದಾರೆ. ಅವರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಹಕ್ಕುಪತ್ರ ನೀಡಬೇಕು. ತಾಲ್ಲೂಕಿನ ಪ್ರಮುಖ ರಸ್ತೆಗಳು ಮಳೆಯಿಂದಾಗಿ ಹದಗೆಟ್ಟಿದ್ದು, ಅವುಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿ ಮನವಿ ಸಲ್ಲಿಸಿದರು.
.ಸಿದ್ದರಾಮಯ್ಯ ಪರ ಶೀಘ್ರ ಮೆರವಣಿಗೆ: ಸಚಿವ ರಾಜಣ್ಣ.
‘ಕಬಿನಿ ಅಣೆಕಟ್ಟೆ ಮುಂಭಾಗದಲ್ಲಿ ಪ್ರವಾಹದಿಂದ ನಿರಾಶ್ರಿತರಾದ 41 ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ಭೂಮಿ ನೀಡಲಾಗಿದೆ. ಆದರೆ, ಮನೆ ನಿರ್ಮಾಣವಾಗದೆ ನಿರಾಶ್ರಿತರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಗುಂಪು ಮನೆ ಯೋಜನೆಯಡಿ ಮನೆ ನಿರ್ಮಿಸಿಕೊಡಬೇಕು’ ಎಂದು ಕೋರಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಡಿ. ರವಿಶಂಕರ್, ದರ್ಶನ್ ಧ್ರುವನಾರಾಯಣ, ಎಚ್.ಎಂ. ಗಣೇಶ್ ಪ್ರಸಾದ್, ಪಿ.ಎಂ. ನರೇಂದ್ರಸ್ವಾಮಿ, ಮುಡಾ ಅಧ್ಯಕ್ಷ ಕೆ.ಮರಿಗೌಡ, ಜಲ ಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಮಾಜಿ ಸಚಿವ ಕೋಟೆ ಎಂ.ಶಿವಣ್ಣ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ್ ರೆಡ್ಡಿ, ಎಸ್ಪಿ ಎನ್. ವಿಷ್ಣುವರ್ಧನ್, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ. ಮಹೇಶ್, ಮುಖ್ಯ ಎಂಜಿನಿಯರ್ ಆರ್.ಎಲ್.ವೆಂಕಟೇಶ್, ಎಸ್ಇ ಮಹೇಶ್, ಇಇ ಚಂದ್ರಶೇಖರ್, ಎಇಇ ಗಣೇಶ್, ಉಷಾ, ರಾಮೇಗೌಡ ಪಾಲ್ಗೊಂಡಿದ್ದರು.
.ಮುಡಾ ಪ್ರಕರಣ | ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ: ಬಿ.ಎಸ್. ಶಿವಣ್ಣ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.