ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದಸರಾ ಕವಿಗೋಷ್ಠಿ: ಹಿಂದೆ ಸರಿದ ಲೇಖಕಿ ಬಾನು ಮುಷ್ತಾಕ್

Published : 6 ಅಕ್ಟೋಬರ್ 2024, 8:18 IST
Last Updated : 6 ಅಕ್ಟೋಬರ್ 2024, 8:18 IST
ಫಾಲೋ ಮಾಡಿ
Comments

ಮೈಸೂರು: ‘ಈ ಬಾರಿಯ ದಸರಾ ಪ್ರಧಾನ (ಸಮೃದ್ಧ) ಕವಿಗೋಷ್ಠಿಯಲ್ಲಿ ಭಾಗವಹಿಸದಿರಲು ತೀರ್ಮಾನಿಸಿದ್ದೇನೆ’ ಎಂದು ಲೇಖಕಿ ಬಾನು ಮುಷ್ತಾಕ್ ತಿಳಿಸಿದ್ದಾರೆ.

ಈ ಬಗ್ಗೆ ಫೇಸ್‌ಬುಕ್‌ ಖಾತೆಯಲ್ಲಿ ಭಾನುವಾರ ಪೋಸ್ಟ್‌ ಹಾಕಿರುವ ಅವರು, ‘ನಾನು ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸಲು ಒಪ್ಪಿದ್ದೆ. ಈ ಹಿಂದೆ ನಾನು ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸಿದ್ದೆ. ಆದರೆ, ಇತ್ತೀಚಿಗಿನ ಕೆಲವು ಸಂವಾದಗಳನ್ನು ಗಮನಿಸಿದಾಗ, ಬೇರೆಯವರಿಗೆ ಅವಕಾಶಗಳನ್ನು ಕೊಡುವುದು ಕೂಡ ಅಗತ್ಯವೆಂದು ಅನಿಸಿದೆ. ಆದ್ದರಿಂದ ನಾನು 2024ರ ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸದೇ ಇರಲು ನಿರ್ಧರಿಸಿದ್ದೇನೆ. ನಿಮಗೆ ಉಂಟಾಗಿರುವ ಅನಾನುಕೂಲಕ್ಕೆ ಕ್ಷಮೆ ಇರಲಿ’ ಎಂದು ಬರೆದಿದ್ದಾರೆ.

ಕವಿಗೋಷ್ಠಿಯಲ್ಲಿ ಈ ಹಿಂದೆ ಪಾಲ್ಗೊಂಡಿದ್ದವರಿಗೇ ಮತ್ತೆ ಅವಕಾಶ ಕೊಟ್ಟಿರುವುದು, ದಕ್ಷಿಣ ಕರ್ನಾಟಕದವರಿಗೇ ಹೆಚ್ಚಿನ ಆದ್ಯತೆ ನೀಡಿರುವ ಉಪಸಮಿತಿಯ ನಡೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾದ ಕಾರಣದಿಂದ ಅವರು ಭಾಗವಹಿಸದಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇದರೊಂದಿಗೆ, ಕವಿಗೋಷ್ಠಿಯಿಂದ ಹಿಂದೆ ಸರಿದವರಲ್ಲಿ ಬಾನು 2ನೇಯವರಾಗಿದ್ದಾರೆ. ನಾನು ಪಾಲ್ಗೊಳ್ಳದಿರಲು ನಿರ್ಧರಿಸಿದ್ದೇನೆ ಎಂದು ಕವಿ ಆರಿಫ್‌ ರಾಜಾ ಶನಿವಾರ ತಿಳಿಸಿದ್ದರು. ಅ.9ರಂದು ಸಮೃದ್ಧ ಕವಿಗೋಷ್ಠಿ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT