ರಾಮನಗರ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿರುವ ವಿಚಾರಣೆಗೆ ಗುರುವಾರ ಬಿಡದಿ ಧ್ಯಾನ ಪೀಠದ ನಿತ್ಯಾನಂದ ಸ್ವಾಮೀಜಿ ಗೈರಾಗಿದ್ದರು.

ನಿತ್ಯಾನಂದ ಮತ್ತು ಅವರ ಐವರು ಶಿಷ್ಯಂದಿರ ವಿರುದ್ಧದ ವಿಚಾರಣೆಯು ನ್ಯಾಯಾಲಯದಲ್ಲಿ ನಡೆಯುತ್ತಿದೆ. ಸಾಕಷ್ಟು ಬಾರಿ ಸ್ವಾಮೀಜಿ ವಿಚಾರಣೆಗೆ ಗೈರಾಗಿದ್ದಾರೆ. ಇಂದು ಆರೋಪಿಗಳು ವಿಚಾರಣೆಗೆ ಬರಬೇಕಿತ್ತು. ಆದರೆ ಅವರ ಗೈರಿನ ಕಾರಣ ನ್ಯಾಯಾಧೀಶ ಗೋಪಾಲಕೃಷ್ಣ ರೈ ವಿಚಾರಣೆಯನ್ನು ಜನವರಿ 3ಕ್ಕೆ ಮುಂದೂಡಿದರು.

ಪೋಸ್ಟರ್ ಅಭಿಯಾನ

‘ನಿತ್ಯಾನಂದ ಸ್ವಾಮೀಜಿ ಕಾಣೆಯಾಗಿದ್ದು, ಆತನನ್ನು ಹುಡುಕಿ ಕೊಟ್ಟವರಿಗೆ ಸೂಕ್ತ ಬಹುಮಾನ ನೀಡಲಾಗುವುದು’ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ರಮೇಶ್ ಗೌಡ ಮತ್ತು ಕಾರ್ಯಕರ್ತರು ನಗರದಲ್ಲಿ ಪೋಸ್ಟರ್‌ಗಳನ್ನು ಅಂಟಿಸಿ ಅಸಮಾಧಾನ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.