ರಾಯಚೂರು: ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಡಿ ಕಾರ್ಯನಿರ್ವಹಿಸುವ ಏಳು ಕೃಷಿ ವಿಜ್ಞಾನ ಕೇಂದ್ರಗಳು ಹಾಗೂ ಆರು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರಗಳ ಮುಖಾಂತರ ಇದುವರೆಗೆ ಒಟ್ಟು 20 ರೈತ ಉತ್ಪಾದಕರ ಸಂಸ್ಥೆಗಳನ್ನು ಸ್ಥಾಪಿಸಲಾಗಿದೆ ಎಂದು ಕುಲಪತಿ ಡಾ.ಕೆ.ಎನ್.ಕಟ್ಟಿಮನಿ ತಿಳಿಸಿದ್ದಾರೆ.

ಕೇಂದ್ರ ಕೃಷಿ ಸಚಿವಾಲಯವು 2019-20 ರಿಂದ 2023 ರವರೆಗಿನ ಐದು ವರ್ಷಗಳ ಅವಧಿಯಲ್ಲಿ 10,000 ರೈತ ಉತ್ಪಾದಕರ ಸಂಸ್ಥೆಗಳನ್ನು ಸ್ಥಾಪಸಿ ದೇಶದ ರೈತರ ಆರ್ಥಿಕತೆ ಸುಧಾರಿಸಲು ಸಲಹೆ ನೀಡಿದೆ. ಅದರಂತೆ ಕ್ರಮ ವಹಿಸಲಾಗಿದೆ. ರೈತ ಉತ್ಪಾದಕರ ಸಂಸ್ಥೆಗಳು ನೋಂದಾಯಿತ ಸಂಸ್ಥೆಗಳಾಗಿದ್ದು, ಕಂಪನಿ ಕಾಯ್ದೆ 2013/ಕೋ-ಆಪರೇಟಿವ್ ಸೊಸೈಟಿ ಕಾಯ್ದೆ ಅಡಿಯಲ್ಲಿ ನೋಂದಣಿಯಾದ, ಒಂದು ಇಲ್ಲವೇ ಒಂದಕ್ಕಿಂತ ಹೆಚ್ಚು ಉತ್ಪನ್ನಗಳನ್ನು ಉತ್ಪಾದಿಸುವ ಪ್ರಾಥಮಿಕ ಉತ್ಪಾದಕರಾದ 200 ರಿಂದ 500 ರೈತ ಸದಸ್ಯರಗಳನ್ನು ಹೊಂದಿದ ಸಂಸ್ಥೆಗಳಾಗಿವೆ ಎಂದು ತಿಳಿಸಿದ್ದಾರೆ.

’ಒಂದು ಜಿಲ್ಲೆ - ಒಂದು ಉತ್ಪನ್ನ‘ ಘೋಷವಾಕ್ಯದಡಿ ಬೀದರ್ ಜಿಲ್ಲೆಯಲ್ಲಿ ಶುಂಠಿ, ಕಲಬುರಗಿ ಜಿಲ್ಲೆಯಲ್ಲಿ ತೊಗರಿ, ರಾಯಚೂರು ಜಿಲ್ಲೆಯಲ್ಲಿ ಮೆಣಸಿನಕಾಯಿ, ಕೊಪ್ಪಳ ಜಿಲ್ಲೆಯಲ್ಲಿ ಪೇರಲ/ಭತ್ತ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಅಂಜೂರದ ಉತ್ಪನ್ನಗಳನ್ನು ಹೆಚ್ಚಿಸಲು ಅಗತ್ಯವಿರುವ ಎಲ್ಲ ತಾಂತ್ರಿಕ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ಒದಗಿಸಿ ರೈತ ಉತ್ಪಾದಕ ಸಂಸ್ಥೆಗಳ ಬಲವರ್ಧನೆಗೆ ಸಹಕರಿಸಲಾಗುತ್ತಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.