ಮಸ್ಕಿ (ರಾಯಚೂರು ಜಿಲ್ಲೆ): ಪಟ್ಟಣದಲ್ಲಿ ಶುಕ್ರವಾರ ಗರ್ಭಿಣಿಯೊಬ್ಬರು ಹೆರಿಗೆಗಾಗಿ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯೆ ಆಟೊದಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಪಟ್ಟಣದ ಸಂತೆ ಬಜಾರ್ ರಸ್ತೆಯ ನಿವಾಸಿಯಾದ ಮಹಿಳೆಗೆ ಬೆಳಿಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಕುಟುಂಬಸ್ಥರು ತಕ್ಷಣ ಮಹಿಳೆಯನ್ನು ಆಟೊದಲ್ಲಿ ಕೂರಿಸಿಕೊಂಡು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ನೋವು ಹೆಚ್ಚಾಗಿದೆ. ಹೀಗಾಗಿ ಚಾಲಕ ಮಾರ್ಗ ಮಧ್ಯದಲ್ಲಿಯೇ ಆಟೊ ನಿಲ್ಲಿಸಿದ್ದಾನೆ. ಸ್ಥಳೀಯ ಮಹಿಳೆಯರು ಹಾಗೂ ಕುಟುಂಬದ ಸದಸ್ಯರು ಆಟೊ ಸುತ್ತ ಪರದೆ ಕಟ್ಟಿ ಹೆರಿಗೆಗೆ ಸಹಕಾರ ನೀಡಿದ್ದಾರೆ. ಮಹಿಳೆಯು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ–ಮಗು ಆರೋಗ್ಯವಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಬಂದ ಆಶಾ ಕಾರ್ಯಕರ್ತೆಯರು, ಮಹಿಳೆ ಹಾಗೂ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.