ಜಾಲಹಳ್ಳಿ: ದೇವದುರ್ಗ ವಿಧಾನಸಭಾ ಕ್ಷೇತ್ರದ ಶಾಸಕಿ ಕರೆಮ್ಮ ಜಿ.ನಾಯಕ ಅವರ ವಿರುದ್ದ ನಿಂದನೆ ಮಾಡಿ ಹಲ್ಲೆಗೆ ಯತ್ನಿಸಿದ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಸಿಪಿಐಎಂ ಪಕ್ಷದ ತಾಲ್ಲೂಕು ಸಮಿತಿ ಕಾರ್ಯದರ್ಶಿ ನರಸಣ್ಣ ನಾಯಕ ಆಗ್ರಹಿಸಿದ್ದಾರೆ.

ಶುಕ್ರವಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ತಾಲ್ಲೂಕಿನ ಚುನಾಯಿತ ಪ್ರತಿನಿಧಿಯನ್ನೆ ಅಶ್ಲೀಲ ಪದಗಳಿಂದ ನಿಂದಿಸಿ, ಹಲ್ಲೆಗೂ ಮುಂದಾಗಿರುವ ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಾಗಿದೆ.
ಒಬ್ಬರನ್ನು ಮಾತ್ರ ಬಂಧಿಸಿ ಉಳಿದವನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಮೀನಾಮೇಷ ಮಾಡುತ್ತಿರುವುದು ಸರಿಯಾದ ಕ್ರಮ ಅಲ್ಲ. ತಕ್ಷಣವೇ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದರು.

ಪೊಲೀಸರ ವೈಫಲ್ಯದಿಂದ ಶಾಸಕರಿಗೆ ರಕ್ಷಣೆ ಇಲ್ಲವಾಗಿದೆ. ತಾಲ್ಲೂಕಿನಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಾಲ್ಲೂಕಿನಲ್ಲಿ ನಡೆಯುವ ಪ್ರತಿಯೊಂದು ಅಕ್ರಮ ದಂಧೆಗಳ ಬಗ್ಗೆ ಮತ್ತು ಅ ದಂಧೆಗಳ ಸೂತ್ರಧಾರಿ ಯಾರು ಎನ್ನುವುದನ್ನು ಪತ್ತೆಹಚ್ಚಿ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.