ಸಿರವಾರ: ‘ಕನ್ನಡ ಭಾಷೆ ರಾಜ್ಯಕ್ಕೆ ಉಸಿರು. ರಾಜ್ಯ ಸರ್ಕಾರ ಕನ್ನಡ ಭಾಷಾ ಕಲಿಕೆಯನ್ನು ಕಡ್ಡಾಯಗೊಳಿಸಬೇಕು’ ಎಂದು ಹಂಪಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ, ಕಥೆಗಾರ ಅಮರೇಶ ನುಗಡೋಣಿ ಹೇಳಿದರು.

ಪಟ್ಟಣದ ಶಾಂತಿನಿಕೇತನ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ, ಕವಿಗೋಷ್ಠಿಯನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.

‘ಕನ್ನಡ ಮಾಧ್ಯಮ ಸರ್ಕಾರಿ ಶಾಲೆಗಳು ಉಳಿಯಬೇಕಾದರೆ ಕನ್ನಡದಲ್ಲಿ ಸಂವಹನ, ಸ್ಪರ್ಧಾತ್ಮಕ ಪರೀಕ್ಷೆ, ಸರ್ಕಾರಿ ಆದೇಶಗಳು, ಆಡಳಿತ ಎಲ್ಲವೂ ನಡೆಯಬೇಕು. ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ, ಉತ್ತಮ ಸಂಸ್ಕಾರ ನೀಡಬೇಕು’ ಎಂದು ಸಲಹೆ ನೀಡಿದರು.

ಶಾಸಕ ಜಿ.ಹಂಪಯ್ಯ ನಾಯಕ ಮಾತನಾಡಿದರು. ರಾಜ್ಯೋತ್ಸವ ಪ್ರಶಸ್ತಿ ಪಡೆದ ಮಲ್ಲಮ್ಮ ಸೂಲಗಿತ್ತಿ, ಸುವರ್ಣ ಸಂಭ್ರಮ ಪ್ರಶಸ್ತಿ ಪುರಸ್ಕೃತರಾದ ಅಯ್ಯಮ್ಮ ಯಡವಲ್, ಕರವೇ ವೆಂಕಟೇಶ ದೂರೆ, ಶಿಕ್ಷಕ ಮಹೇಶ, ರಮೇಶ ಭಂಡಾರಿ, ಮಾಜಿ ಸೈನಿಕ ಚನ್ನಾರಡ್ಡಿ, ಆಶಾ–ಅಂಗನವಾಡಿ ಕಾರ್ಯಕರ್ತೆಯರಾದ ಯಲಮ್ಮ, ಯು.ಲಕ್ಷ್ಮಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ವೈ.ಭೂಪನಗೌಡ, ಉಪಾಧ್ಯಕ್ಷೆ ಲಕ್ಷ್ಮಿ ಆದೆಪ್ಪ, ತಹಶೀಲ್ದಾರ್ ರವಿ ಎಸ್.ಅಂಗಡಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ತಿಮ್ಮಪ್ಪ ಜಗ್ಲಿ, ಶಾಂತಿನಿಕೇತನ ಶಾಲೆ ಅಧ್ಯಕ್ಷ ಬಸಲಿಂಗಪ್ಪ ಅರಕೇರಿ, ಚುಕ್ಕಿ ಸೂಗಪ್ಪ ಸಾಹುಕಾರ, ಶಿವಶರಣರ ಅರಕೇರಿ, ಟಿ.ಬಸವರಾಜ, ಕಸಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಾಯಪ್ಪ ಹೊಸೂರು, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಸುರೇಶ ಹೀರಾ, ಬೆಳಕು ಸಂಸ್ಥಾಪಕ ಅಣ್ಣಪ್ಪ ಮೇಟಿಗೌಡ, ಯು.ಅನುರಾಧಾ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.