ರಾಯಚೂರು: ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಬಾಡಿ ಬಿಲ್ಡರ್ ಅಸೋಸಿಯೇಶನ್ ವತಿಯಿಂದ ಮಾರ್ಚ್ 14ರಂದು ದೇಹದಾರ್ಢ್ಯ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಅಸೋಸಿಯೇಶನ್ ಕಾರ್ಯದರ್ಶಿ ಸುಧಾಕರ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳಲ್ಲಿಯೇ ರಾಜ್ಯಮಟ್ಟದ ದೇಹಧಾರ್ಡ್ಯ ಸ್ಪರ್ಧೆ ನಡೆಯಲಿದ್ದು ಆನಂತರ ವಿಶಾಖಪಟ್ಟಣಮ್‌ನಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆ ನಡೆಯಲಿದೆ. ರಾಜ್ಯಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದವರು ರಾಷ್ಟ್ರಮಟ್ಟಕ್ಕೆ ಸ್ಪರ್ಧಿಸಬಹುದಾಗಿದೆ.

ವಿಜೇತರಿಗೆ ಮಿಸ್ಟರ್ ಪಂಚಮುಖಿ ಪ್ರಶಸ್ತಿ ನೀಡಲಾಗುವುದು. ಪುರುಷ, ಮಹಿಳಾ, ವಿಕಲಚೇತನರು ಸೇರಿ ವಿವಿಧ 8 ವಿಭಾಗಗಳ ಸ್ಪರ್ಧೆ ನಡೆಯಲಿದೆ. ಕಾರ್ಯಕ್ರಮಕ್ಕೆ ಶಾಸಕ ಸತೀಶ ಜಾರಕಿಹೊಳಿ ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸ್ಪರ್ಧೆಯಲ್ಲಿ ಭಾಗವಹಿಸಲು ₹200 ನೋಂದಣಿ ಶುಲ್ಕವಿದ್ದು 200ರಿಂದ ಸ್ಪರ್ಧಿಗಳು ಪಾಲ್ಗೊಳ್ಳಬಹುದು ಎಂದು ಹೇಳಿದರು.

ಜಿಲ್ಲಾ ಅಸೋಸಿಯೇಶನ್ ಅಧ್ಯಕ್ಷ ಮಂಜುನಾಥ ಹಾನಗಲ್, ಸಂಪತ್ ಕುಮಾರ, ತಾರಾನಾಥ, ವಿನೋದಕುಮಾರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.