ಮಸ್ಕಿ: ತಾಲ್ಲೂಕಿನ ಬೈಲಗುಡ್ಡ ಗ್ರಾಮದಲ್ಲಿ ಶಾಲಾ ಸಮಯಕ್ಕೆ ಸರಿಯಾಗಿ ಬಸ್ ಬಾರದ ಕಾರಣ ವಿದ್ಯಾರ್ಥಿಗಳು ಬಸ್ ತಡೆದು ಮಂಗಳವಾರ ಪ್ರತಿಭಟನೆ ನಡೆಸಿದರು.

ಪರೀಕ್ಷೆಗಳು ಆರಂಭವಾಗಿದ್ದರಿಂದ ಶಾಲಾ ಸಮಯಕ್ಕೆ ಸರಿಯಾಗಿ ಬಸ್ ಬಿಡದ ಕಾರಣ ಶಾಲಾ–ಕಾಲೇಜು ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಪೂರ್ವಸಿದ್ಧತಾ ಪರೀಕ್ಷೆ ನಡೆಯುತ್ತಿದೆ. ಸಮಯಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಸಾರಿಗೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಕ್ರಮ ಕೈಗೊಂಡಿಲ್ಲ ಎಂದು ಈಶಾನ್ಯ ಸಾರಿಗೆ ಸಂಸ್ಥೆ ಮಸ್ಕಿ ಘಟಕದ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದರು.

ಬೈಲಗುಡ್ಡ ಒಂದೇ ಗ್ರಾಮದಿಂದ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಸ್ಕಿ ಪಟ್ಟಣಕ್ಕೆ ಬರುತ್ತಾರೆ. ಮಂಗಳವಾರ ಬಸ್ ತಡವಾಗಿ ಬಂದಿದ್ದರಿಂದ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಆಗುವಂತಾಗಿದೆ ಎಂದು ದೂರಿದ್ದಾರೆ.

ಕೂಡಲೇ ಸ್ಥಳೀಯ ಶಾಸಕರು ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಶಾಲಾ–ಕಾಲೇಜುಗಳ ಸಮಯಕ್ಕೆ ಸರಿಯಾಗಿ ಬಸ್ ಓಡಿಸಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮಸ್ಕಿಯ ರಸ್ತೆಯಲ್ಲಿ ಸಂಚಾರ ತಡೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.