ಸಿಂಧನೂರು: ನಗರದ ಸುಕಾಲಪೇಟೆ ಪಕ್ಕದಲ್ಲಿರುವ ಹಳ್ಳದಲ್ಲಿ ಭಾನುವಾರ ಮೊಸಳೆಯೊಂದು ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಪ್ರಾದೇಶಿಕ ವಲಯ ಮಾನ್ವಿ ವತಿಯಿಂದ ಮೊಸಳೆ ಪ್ರತ್ಯಕ್ಷವಾದ ಪ್ರದೇಶದಲ್ಲಿ ‘ಈ ಹಳ್ಳದಲ್ಲಿ ಮೊಸಳೆಗಳು ಇವೆ. ಯಾರೂ ಹಳ್ಳದಲ್ಲಿ ಇಳಿಯಬಾರದು’ ಎಂಬ ಸಂದೇಶದ ಬ್ಯಾನರ್ ಅಳವಡಿಸಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.

ಭಾನುವಾರ ಹಳ್ಳದಲ್ಲಿ ಪ್ರತ್ಯಕ್ಷವಾಗಿ ಮೊಸಳೆ ಕುರಿಯೊಂದನ್ನು ಬಲಿ ಪಡೆದಿತ್ತು. ಈ ಬಗ್ಗೆ ಕುರಿಗಾಹಿಯೊಬ್ಬರಿಂದ ಮಾಹಿತಿ ಪಡೆದಿದ್ದ ನಮ್ಮ ಕರ್ನಾಟಕ ಸೇನೆಯ ತಾಲ್ಲೂಕು ಘಟಕದ ಮುಖಂಡರು ಸ್ಥಳೀಯ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು.

ಅಲ್ಲದೇ ತಾಲ್ಲೂಕು ಅರಣ್ಯಾಧಿಕಾರಿ ಅರುಣಾ ಅವರ ಮೂಲಕ ಪ್ರಾದೇಶಿಕ ವಲಯ ಅರಣ್ಯಾಧಿಕಾರಿಗಳಿಗೆ ಮನವಿ ಪತ್ರ ರವಾನಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯಿಂದ ಹಳ್ಳದಲ್ಲಿ ಎಚ್ಚರಿಕೆಯ ಬ್ಯಾನರ್ ಅಳವಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.