ಸಿಂಧನೂರು: ನಗರದಲ್ಲಿ ಮೈಸೂರು ದಸರಾ ಮಾದರಿಯಲ್ಲಿ ಅಕ್ಟೋಬರ್ 4ರಿಂದ ಒಂಭತ್ತು ದಿನಗಳವರೆಗೆ ದಸರಾ ಮಹೋತ್ಸವ ಅದ್ಧೂರಿಯಾಗಿ ಆಚರಿಸಲು ಶುಕ್ರವಾರ ನಿರ್ಧರಿಸಲಾಯಿತು.

ನಗರದ ಟೌನ್ಹಾಲ್ನಲ್ಲಿ ಶಾಸಕ ಹಂಪನಗೌಡ ಬಾದರ್ಲಿಯವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜರುಗಿತು.

ಅಕ್ಟೋಬರ್ 4ರಿಂದ ದಸರಾ ಆರಂಭಗೊಳ್ಳಲಿದ್ದು, 9 ದಿನ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಇದಕ್ಕೆ ಕಲ್ಯಾಣ ದಸರಾ ಎಂದು ಹೆಸರಿಡಲಾಗಿದೆ. ನಂತರ ಯುವ ದಸರಾ, ಕ್ರೀಡಾ ದಸರಾ, ಗಾಯನ ದಸರಾ, ಸಾಹಿತ್ಯ ದಸರಾ, ಮಹಿಳಾ ದಸರಾ, ರೈತ ದಸರಾ ಆಚರಿಸಿ ಒಂಭತ್ತನೇ ದಿನ ಸಮಾರೋಪ ಮಾಡಲಾಗುವುದು. ವಿವಿಧ ಪಕ್ಷಗಳು, ಸಂಘಟನೆಗಳು, ಶಿಕ್ಷಣ ಸಂಸ್ಥೆಗಳು, ಮಹಿಳಾ ಸಂಘಟನೆಗಳು ಸೇರಿ ಎಲ್ಲಾ ಸಮುದಾಯಗಳ ಮುಖಂಡರು ಸರ್ವರೂ ಸಮಭಾವದಿಂದ ‘ಸಿಂಧನೂರು ದಸರಾ’ ಉತ್ಸವಕ್ಕೆ ಸಹಕರಿಸಬೇಕು ಎಂದು ಹಂಪನಗೌಡ ಬಾದರ್ಲಿ ಮನವಿ ಮಾಡಿದರು.

ಅತ್ಯಂತ ವಿನೂತನವಾಗಿ ಸಿಂಧನೂರಿನಲ್ಲಿ ಪ್ರಥಮವಾಗಿ ನಡೆಯುವ ಈ ದಸರಾ ಉತ್ಸವದಲ್ಲಿ ಭಾಗವಹಿಸುವಂತೆ ಈಗಾಗಲೇ ಸಿಎಂ, ಡಿಸಿಎಂ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಉನ್ನತ, ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ ಮಾಡಲಾಗಿದೆ. ಬರಲು ಒಪ್ಪಿಕೊಂಡಿದ್ದಾರೆ. ಸಂಪನ್ಮೂಲ ಕ್ರೋಢೀಕರಣದ ಅವಶ್ಯಕತೆ ಇದ್ದು, ₹3 ಕೋಟಿ ಅಂದಾಜು ಪಟ್ಟಿ ತಯಾರಿಸಲಾಗಿದೆ. ಇನ್ನೂ ₹2.5 ಕೋಟಿ ಹೆಚ್ಚುವರಿಯಾಗಿ ಬೇಕಾಗಬಹುದು. ಅದನ್ನೂ ಕ್ರೋಢೀಕರಿಸುವ ಪ್ರಯತ್ನ ಮಾಡಲಾಗುವುದು. ಸರ್ಕಾರಿ ನೌಕರರು ಒಂದು ದಿನದ ವೇತನ, ನಗರಸಭೆ ಸದಸ್ಯರು ಒಂದು ತಿಂಗಳ ವೇತನ ನೀಡಲಿದ್ದಾರೆ. ಶಿಕ್ಷಣ, ಸಹಕಾರ ಸಂಸ್ಥೆ, ವಿವಿಧ ಯೂನಿಯನ್ ಹಾಗೂ ವರ್ತಕರ ಸಂಘದಿಂದ ಸಹಕಾರ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಹಶೀಲ್ದಾರ್ ಅರುಣ್ ದೇಸಾಯಿ ಮಾತನಾಡಿ,‘ಈಗಾಗಲೇ ಒಂಬತ್ತು ದಿನಗಳಲ್ಲಿ ಆಯೋಜಿಸಬೇಕಾದ ಕಾರ್ಯಕ್ರಮದ ಪಟ್ಟಿ ಸಿದ್ಧಪಡಿಸಲಾಗಿದೆ. ಕೊಪ್ಪಳದ ಗವಿಸಿದ್ಧೇಶ್ವರ ಸ್ವಾಮೀಜಿ, ಮಹಾರಾಷ್ಟ್ರ ಕನ್ಹೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಹಾಗೂ ಇನ್ಫೋಸಿಸ್ನ ಸುಧಾಮೂರ್ತಿಯವರನ್ನು ಆಹ್ವಾನಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಕೊನೆಯ ದಿನ ಅಂಬಾರಿಯಲ್ಲಿ ಅಂಬಾದೇವಿ ಮೂರ್ತಿಯ ಮೆರವಣಿಗೆ ನಡೆಸಲು ಉದ್ದೇಶಿಸಲಾಗಿದೆ’ ಎಂದರು.

ಸಮುದಾಯದ ರಾಜ್ಯ ಘಟಕದ ಕಾರ್ಯದರ್ಶಿ ಎಸ್.ದೇವೆಂದ್ರಗೌಡ ಮಾತನಾಡಿದರು.

ತಾಲ್ಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎನ್.ರಾಮನಗೌಡ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಹಿರೇಮಠ, ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಶ್ರೀದೇವಿ ಶ್ರೀನಿವಾಸ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಿದ್ಧೇಶ್ವರಿ, ಉಪನ್ಯಾಸಕರ ಸಂಘದ ಶರಣಪ್ಪ ಹೊಸಳ್ಳಿ, ಚುಟುಕು ಸಾಹಿತ್ಯ ಪರಿಷತ್ತಿನ ಬೀರಪ್ಪ ಶಂಭೋಜಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವೈ.ನರೇಂದ್ರನಾಥ, ದಲಿತ ಸಾಹಿತ್ಯ ಪರಿಷತ್ತಿನ ಹುಸೇನಪ್ಪ ಅಮರಾಪುರ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಅಭಿಪ್ರಾಯ ತಿಳಿಸಿದರು.

ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು, ಡಿವೈಎಸ್ಪಿ ಬಿ.ಎಸ್.ತಳವಾರ ಹಾಗೂ ಸಿಪಿಐ ವೀರಾರೆಡ್ಡಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.