ಸಿಂಧನೂರು: ಸಿಂಧನೂರು ನಗರದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಅವುಗಳನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಿ ನಿಯಂತ್ರಿಸಬೇಕು’ ಎಂದು ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾದ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ಗಂಗಾಧರ್ ಒತ್ತಾಯಿಸಿದ್ದಾರೆ.

‘ಎರಡು ದಿನದ ಹಿಂದೆ ಪೊಲೀಸ್ ಕಾನ್ಸ್ಟೆಬಲ್ರ ಪತ್ನಿ ಹಾಗೂ ಪುತ್ರನಿಗೆ ಬೀದಿ ನಾಯಿಯೊಂದು ಆದರ್ಶ ಕಾಲೊನಿಯಲ್ಲಿ ಕಚ್ಚಿ ಗಂಭೀರ ಗಾಯಗೊಳಿಸಿದೆ. ಇದೊಂದೇ ಘಟನೆಯಲ್ಲ. ನಗರದ ಪ್ರತಿ ವಾರ್ಡ್, ಬಜಾರ್ಗಳಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದೆ. ಬೈಕ್ ಸವಾರರು, ಪಾದಚಾರಿಗಳು ಓಣಿಗಳಲ್ಲಿ ಸಂಚರಿಸಲು ಹಿಂದೇಟು ಹಾಕುವಂತಾಗಿದೆ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

‘ಬೀದಿ ನಾಯಿಗಳನ್ನು ನಿಯಂತ್ರಿಸಬೇಕಾದ ನಗರಸಭೆಯವರು ಮೌನವಹಿಸಿದ್ದು, ನಿರ್ಲಕ್ಷ್ಯ ತಾಳಿದ್ದಾರೆ. ಅದರಿಂದಾಗಿ ಜನರು ಜೀವವನ್ನು ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ಇದಲ್ಲದೆ ನಗರದಲ್ಲಿ ಬಿಡಾಡಿ ದನಗಳ ಹಾವಳಿಯೂ ಸುಗಮ ಸಂಚಾರಕ್ಕೆ ದೊಡ್ಡ ಅಡ್ಡಿಯಾಗಿದೆ. ಬೀದಿ ನಾಯಿ ಹಾಗೂ ಬಿಡಾಡಿ ದನಗಳ ನಿಯಂತ್ರಣಕ್ಕೆ ನಗರಸಭೆಯವರು ಕೂಡಲೇ ಕ್ರಮವಹಿಸಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.