ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಸ್ಕಿ: ಮೂವರಿಗೆ ಡೆಂಗಿ

Published 4 ಜುಲೈ 2024, 14:32 IST
Last Updated 4 ಜುಲೈ 2024, 14:32 IST
ಅಕ್ಷರ ಗಾತ್ರ

ಮಸ್ಕಿ: ಪಟ್ಟಣದಲ್ಲಿ ಡೆಂಗಿ ಪ್ರಕರಣಗಳು ಕಂಡು ಬಂದಿದ್ದು, ಒಂದು ವಾರದಲ್ಲಿ ಮೂವರು ಡೆಂಗಿ ಜ್ವರದಿಂದ ಬಳಲುತ್ತಿದ್ದಾರೆ. ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಹಾಗೂ ರಾಯಚೂರಿನ ರೀಮ್ಸ್‌ನಲ್ಲಿ ಒಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

16 ರಿಂದ 18 ವರ್ಷದ ಒಳಗಿನ ಮಕ್ಕಳಲ್ಲಿ ಡೆಂಗಿ ಕಾಣಿಸಿಕೊಂಡಿದೆ. ಒಂದು ಪ್ರಕರಣ ಗಾಂಧಿ ನಗರದಲ್ಲಿ ಬೆಳಕಿಗೆ ಬಂದಿದ್ದರೆ, ಕನಕವೃತ್ತದ ಸಮೀಪದ ಬಡಾವಣೆಯಲ್ಲಿ ಎರಡು ಪ್ರಕರಣಗಳು ಬಂದಿವೆ ಎಂದು ವೈದ್ಯಾಧಿಕಾರಿ ಡಾ. ಮೌನೇಶ ‘ಪ್ರಜಾವಾಣಿ’ ಗೆ ಖಚಿತ ಪಡಿಸಿದ್ದಾರೆ.

ಪಟ್ಟಣದಲ್ಲಿ ಸೊಳ್ಳೆಗಳು ಹರಡದಂತೆ ಸಾರ್ವಜನಿಕರು ಮುಂಜಾಗೃತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಡೆಂಗಿ ಜ್ವರದ ಪ್ರಕರಣಗಳು ಕಂಡು ಬಂದರೆ ಕೂಡಲೇ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರದಿ ಮಾಡುವಂತೆ ಖಾಸಗಿ ಆಸ್ಪತ್ರೆಗಳಿಗೆ ಮನವಿ ಮಾಡಿದ್ದಾರೆ.

ಮುಂಜಾಗೃತ ಕ್ರಮವಾಗಿ ಪುರಸಭೆ ಅಧಿಕಾರಿಗಳು ಪಟ್ಟಣದಲ್ಲಿ ಸೊಳ್ಳೆಗಳು ಹೆಚ್ಚು ಸಂಗ್ರಹವಾಗದಂತೆ ಫಾಗಿಂಗ್ ಮಾಡಬೇಕು. ಡೆಂಗಿ ಪ್ರಕರಣದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ ಕೈಗೊಳ್ಳಬೇಕಾದ ಎಚ್ಚರಿಕೆಗಳನ್ನು ಪ್ರಚಾರ ಪಡಿಸುವಂತೆ ಪುರಸಭೆಗೆ ಪತ್ರ ಬರೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT