ದೇವದುರ್ಗ (ರಾಯಚೂರು ಜಿಲ್ಲೆ): ತಾಲ್ಲೂಕಿನ ಜಾಗೀರಜಾಡಲದಿನ್ನಿ ಗ್ರಾಮದ ಮತಗಟ್ಟೆಯಲ್ಲಿ ಬಿ ಎಲ್ ಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬಸವರಾಜ (58) ಮಂಗಳವಾರ ಮಧ್ಯಾಹ್ನ ಹೃದಯಘಾತದಿಂದ ಮೃತಪಟ್ಟಿದ್ದಾರೆ.

ಮೃತ ಬಸವರಾಜ ಸಿರವಾರ ತಾಲ್ಲೂಕಿನ ಅತ್ತನೂರು ಗ್ರಾಮದವರೆಂದು ತಿಳಿದು ಬಂದಿದೆ.

ಏಕಾ ಏಕಿ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಮತಗಟ್ಟೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು ಚೇತರಿಸಿಕೊಂಡಿದ್ದ ಅವರನ್ನು ಸಿರವಾರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗೆ ರಾಯಚೂರಿಗೆ ಕರೆದುಯ್ಯುವ ರಸ್ತೆ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ಸಹಾಯಕ ಚುನಾವಣೆ ಅಧಿಕಾರಿ ಚೇತನ ಕುಮಾರ ತಿಳಿಸಿದರು. ಮೃತ ಬಸವರಾಜ ಅವರಿಗೆ 3 ಜನ ಪುತ್ರಿಯರು, ಪತ್ನಿ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.