ಮಸ್ಕಿ: ‘ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ಕಾಂಗ್ರೆಸ್ಗೆ ಪರ್ಯಾಯವಾಗಿ ಜನಸಂಘ ಹುಟ್ಟು ಹಾಕಿದರು’ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.

ಪಟ್ಟಣದ ಬಸವೇಶ್ವರ ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಜನ್ಮದಿನ ಹಾಗೂ ಡಾ.ಬಾಬು ಜಗಜೀವನರಾಂ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,‘ಮುಖರ್ಜಿ ಅವರು ತ್ಯಾಗ ಹಾಗೂ ಸಮರ್ಪಣೆಯಿಂದ ಸ್ಥಾಪಿಸಿದ ಜನಸಂಘ ಇಂದು ಭಾರತೀಯ ಜನತಾ ಪಕ್ಷವಾಗಿದೆ. ದೇಶ ಹಾಗೂ ವಿವಿಧ ರಾಜ್ಯಗಳಲ್ಲಿ ಮುಖರ್ಜಿ ಅವರ ಆಶಯದಂತೆ ಆಡಳಿತ ನಡೆಸುತ್ತಿದೆ’ ಎಂದರು.

ಕಾರ್ಯಕರ್ತರು ಸಮರ್ಪಣೆ ಭಾವನೆಯಿಂದ ಪಕ್ಷದ ಕೆಲಸ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದರು.

ಹಿರಿಯ ಮುಖಂಡ ಮಲ್ಲಪ್ಪ ಅಂಕುಶದೊಡ್ಡಿ, ಪಕ್ಷದ ಮುಂಡಲ ಕಾರ್ಯದರ್ಶಿ ಶರಣಬಸವ ಸೊಪ್ಪಿಮಠ, ಮಹಿಳಾ ಮೋರ್ಚಾದ ಅಧ್ಯಕ್ಷೆ ಪ್ರಮೀಳಾ ದಾಸರ, ಗವಿಸಿದ್ದಪ್ಪ ಸಾಹುಕಾರ, ನಾಗರಾಜ ಯಂಬಲದ, ಜಿ.ವೆಂಕಟೇಶ ನಾಯಕ, ಮೌನೇಶ ಮುರಾರಿ, ಮೌನೇಶ ನಾಯಕ, ಯಮನಪ್ಪ ಭೋವಿ ಸೇರಿ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.