ರಾಯಚೂರು: ಇಲ್ಲಿನ ರಿಮ್ಸ್ ಆಸ್ಪತ್ರೆಯಲ್ಲಿ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಪಿಎಂ–ಎಬಿಎಚ್ಐಎಂ ಯೋಜನೆಯಡಿ ₹21.85 ಕೋಟಿ ಮೊತ್ತದ 50 ಹಾಸಿಗೆಗಳ ತೀವ್ರ ನಿಗಾ ಘಟಕ ನಿರ್ಮಾಣ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಚಾಲನೆ ನೀಡಿದರು.

ಪ್ರಧಾನಿ ಮೋದಿ ಅವರು ವರ್ಚುವಲ್ ಮೂಲಕ ಮಾತನಾಡಿ,‘ಎಲ್ಲರಿಗೂ ಆರೋಗ್ಯ, ಎಲ್ಲೆಡೆ ಆರೋಗ್ಯ ಸೌಲಭ್ಯ ಸಿಗುವ ನಿಟ್ಟಿನಲ್ಲಿ ₹13,000 ಕೋಟಿ ವೆಚ್ಚದ ವಿವಿಧ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮಾಡಲಾಗಿದೆ. ಎಲ್ಲರಿಗೂ ಉಚಿತ ಆರೋಗ್ಯ ಸೌಲಭ್ಯ ಸಿಗಬೇಕು ಎನ್ನುವ ಉದ್ದೇಶದಿಂದ ಐದು ಹಂತಗಳ ಕಾರ್ಯಾ ಯೋಜನೆ ಮಾಡಲಾಗಿದೆ’ ಎಂದು ತಿಳಿಸಿದರು.

‘ಆರೋಗ್ಯ ರಕ್ಷಣೆಗೆ ಮುಂಜಾಗ್ರತಾ ಕ್ರಮ, ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ, ಉಚಿತ ಚಿಕಿತ್ಸೆ, ವೈದ್ಯರ ಕೊರತೆ ನೀಗಿಸುವುದು ಹಾಗೂ ಅಗತ್ಯ ಸೌಲಭ್ಯ ಹೆಚ್ಚಿಸುವ ಮೂಲಕ ಸ್ವಸ್ಥ್ಯ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸುತ್ತಿದ್ದೇವೆ’ ಎಂದು ಹೇಳಿದರು.

‘ಧನ್ವಂತ್ರಿ ಜಯಂತಿಯ ಅಂಗವಾಗಿ ಆಚರಿಸುವ ಆಯುರ್ವೇದ ದಿನಾಚರಣೆ ಹಿನ್ನೆಲೆಯಲ್ಲಿ ಆಯುರ್ವೇದ ಸೌಲಭ್ಯ ವಿಸ್ತರಣೆಗೆ ಹೊಸ ಸಂಶೋಧನೆಗೆ ಒತ್ತು ನೀಡಲಾಗಿದೆ’ ಎಂದು ಹೇಳಿದರು.

ರಿಮ್ಸ್ನಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಡಾ.ಶಿವರಾಜ ಪಾಟೀಲ, ‘ಕೇಂದ್ರ ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು, ಸಿಬ್ಬಂದಿ ಕಾರ್ಯಪ್ರವೃತ್ತರಾಗಬೇಕು. ವೈದ್ಯರು, ಸಿಬ್ಬಂದಿ ಕೋವಿಡ್ ಸಂಕಷ್ಟದ ಸಂದರ್ಭದಲ್ಲಿಯೂ ಎದೆಗುಂದದೆ ಸೇವೆ ಸಲ್ಲಿಸಿದ್ದಾರೆ. ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಅಭ್ಯಾಸ ಮಾಡಿ ವೃತ್ತಿಯ ಪಾವಿತ್ರ್ಯತೆ ಕಾಪಾಡಬೇಕು’ ಎಂದು ಸಲಹೆ ನೀಡಿದರು.

ನಗರಸಭೆ ಅಧ್ಯಕ್ಷೆ ನರಸಮ್ಮ ನರಸಿಂಹಲು ಮಾಡಗಿರಿ, ರಿಮ್ಸ್ ನಿರ್ದೇಶಕ ಡಾ.ರಮೇಶ ಬಿ.ಎಚ್., ಮುಖ್ಯ ಆಡಳಿತಾಧಿಕಾರಿ ಡಾ.ಕೆ.ಆರ್.ದುರುಗೇಶ, ಒಪೆಕ್ ಆಸ್ಪತ್ರೆಯ ವಿಶೇಷಾಧಿಕಾರಿ ಡಾ.ರಮೇಶ ಸಾಗರ, ವೈದ್ಯಕೀಯ ಅಧೀಕ್ಷಕ ಡಾ.ಭಾಸ್ಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಸುರೇಂದ್ರ ಬಾಬು, ರಿಮ್ಸ್ ಕಾಲೇಜಿನ ಪ್ರಾಂಶುಪಾಲ ಡಾ.ಬಸವರಾಜ ಸ್ವಾಮಿ, ದೀಪಾ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವಿಜಯಶಂಕರ, ಆರ್.ಸಿ.ಎಚ್ ಅಧಿಕಾರಿ ಡಾ.ನಂದಿತಾ, ಆರ್ಥಿಕ ಸಲಹೆಗಾರ ಹನುಮೇಶ, ಡಾ.ಶ್ಯಾಮ, ಶಿವುಕುಮಾರ, ರಿಮ್ಸ್ ವೈದ್ಯಾಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.