ಸಿರವಾರ (ರಾಯಚೂರು ಜಿಲ್ಲೆ): ಸಿರವಾರ ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ಗುರುವಾರ ರಾತ್ರಿ ಮಟನ್ ಊಟ ಮಾಡಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.

ಭೀಮಣ್ಣ(60), ಈರಮ್ಮ (54), ಮಲ್ಲೇಶ (19) ಹಾಗೂ ಪಾರ್ವತಿ (17) ಮೃತರು. ಮಲ್ಲಮ್ಮ ಎಂಬುವವರ ಸ್ಥಿತಿ ಗಂಭೀರವಾಗಿದೆ. ಊಟ ಮಾಡಿ ಅಸ್ವಸ್ಥಗೊಂಡ ಮೂವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂವರು ರಿಮ್ಸ್ನಲ್ಲಿ ಕೊನೆಯುಸಿರೆಳೆದರೆ, ಒಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ವಿಷಪೂರಿತ ಆಹಾರ ಸೇವಿಸಿ ಮೃತಪಟ್ಟಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ತನಿಖೆಯ ನಂತರ ನಿಖರ ಮಾಹಿತಿ ತಿಳಿಯಲಿದೆ ಎಂದು ಪೊಲೀಸರು ಹೇಳಿದ್ದಾರೆ.
.ಮಗು ನೋಡಲು ಬಂದ ಗಂಡನನ್ನು ಕೊಂದ ಹೆಂಡತಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.